ಸಾರಾಂಶ
ಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್ ಆಟಗಾರರಿಗೆ ಶುಭಹಾರೈಸಿದರು
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು.ಈ ಕಾರ್ಯಕ್ರಮದಲ್ಲಿ ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್ ಆಟಗಾರರಿಗೆ ಶುಭಹಾರೈಸಿದರು.ಇದೇ ಸಂದರ್ಭದಲ್ಲಿ ಗಿರಿ ಬ್ಯಾಡ್ಮಿಂಟನ್ ಕ್ಲಬ್ ನೂತನ ಲೋಗೋ ಮತ್ತು ಸಮವಸ್ತ್ರವನ್ನು ಯುವ ಉದ್ಯಮಿ ವಿಕ್ರಾಂತ್ ಶೆಟ್ಟಿ ಕೀಳಂಜೆ ಬಿಡುಗಡೆಗೊಳಿಸಿದರು. ಬಳಿಕ ನೂತನ ಕ್ರೀಡಾಂಗಣದಲ್ಲಿ ನಡೆದ ಪಂದ್ಯಕೂಟಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಚಾಲನೆ ನೀಡಿದರು.ಸಮಾರಂಭದಲ್ಲಿ ಉಡುಪಿ ಚಿನ್ನ ಮತ್ತು ಬೆಳ್ಳಿ ಕೆಲಸಗಾರರ ಸಂಘದ ಗೌರವ ಅಧ್ಯಕ್ಷ ಕಿಶೋರ್ ಆಚಾರ್ಯ, ಹಂಸಿನಿ ಸ್ಪೋರ್ಟ್ಸ್‌ನ ಶ್ರೀಶ ಆಚಾರ್ಯ, ಹಿಂದೂ ಗುರು ಸೇವಾ ಪರಿಷತ್ ಅಧ್ಯಕ್ಷ ಸುಧಾಕರ ಆಚಾರ್ಯ, ಹಾವಂಜೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸದಾಶಿವ ಮುಂತಾದವರು ಉಪಸ್ಥಿತರಿದ್ದರು.ಜಯಗಳಿಸಿದ ತಂಡಗಳಿಗೆ ಟ್ರೋಫಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಎಲ್ಲ ಸದಸ್ಯರು ಭಾಗವಹಿಸಿದರು. ಕಾರ್ಯಕ್ರಮವನ್ನು ಡಾ. ಸಂದೇಶ್ ಶೆಟ್ಟಿ ನಿರೂಪಿಸಿದರು.