ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಶೀಘ್ರ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ

| Published : Jul 06 2024, 12:47 AM IST

ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಶೀಘ್ರ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ೩೦೦ ಹಾಸಿಗೆ ಆಸ್ಪತ್ರೆಯಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ೫೫ ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಬಿಡುಗಡೆಗೆ ಪ್ರಯತ್ನಿಸಲಾಗುವುದು. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆಸ್ಪತ್ರೆಯ ಸೇವೆ ಒದಗಿಸಲಾಗುತ್ತಿದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿನ ಖಾಲಿ ಇರುವ ವೈದ್ಯರ ಹುದ್ದೆಗಳು, ತಜ್ಞರು ಹಾಗೂ ಇತರರ ನೇಮಕ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಬಳಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು.

ಆಸ್ಪತ್ರೆಗೆ ತೆರಳಿ ತುರ್ತು ಚಿಕಿತ್ಸಾ ವಿಭಾಗ, ರಕ್ತನಿಧಿ ಕೇಂದ್ರ, ಹೊಸದಾಗಿ ಅಳವಡಿಸಿರುವ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಮತ್ತಿತರ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಸುಜಾತ ರಾಥೋಡ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಡಾ.ರೂಪೇಶ್ ಗೋಪಾಲ್, ಡಾ.ಲೋಕೇಶ್, ವಿವಿಧ ವಿಭಾಗದ ಮುಖ್ಯಸ್ಥರು ಇತರರು ಇದ್ದರು.