ಎಸ್‌ಡಿಎಂ ಮಹಾವಿದ್ಯಾಲಯ ನವೀಕೃತ ಕಟ್ಟಡ ಉದ್ಘಾಟನೆ

| Published : Nov 25 2024, 01:04 AM IST

ಸಾರಾಂಶ

ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಹೊಸ ಕಾಲದ ಸ್ಪರ್ಧಾತ್ಮಕತೆಯನ್ನು ದೃಷ್ಟಿಯಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸುವ ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳನ್ನು ಒದಗಿಸುವುದರ ಕಡೆಗೆ ಎಸ್.ಡಿ.ಎಂ ಸಂಸ್ಥೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಶಿಕ್ಷಣ ಮಹಾವಿದ್ಯಾಲಯದ ನವೀಕೃತ ಕಟ್ಟಡವೊಂದನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.

ಎಸ್.ಡಿ.ಎಂ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪೂರನ್ ವರ್ಮ ಮಾತನಾಡ, ಸಮಾಜಕ್ಕೆ ಅಗತ್ಯವಿರುವ ವೈದ್ಯರು, ಎಂಜಿನಿಯರ್‌ಗಳು, ಪೊಲೀಸರು ಸೇರಿದಂತೆ ವಿವಿಧ ವೃತ್ತಿಗಳಿಗೆ ಬೇಕಾಗುವ ಸಮರ್ಥ ವ್ಯಕ್ತಿಗಳನ್ನು ನಿರ್ಮಿಸುವ ಶಕ್ತಿಯಿರುವುದು ಶಿಕ್ಷಕರಿಗೆ ಮಾತ್ರ ಎಂದರು.

ಎಸ್. ಡಿ. ಎಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್ ಸಲ್ದಾನ ಸ್ವಾಗತಿಸಿದರು.