29ರಂದು ಭದ್ರಾವತಿಯಲ್ಲಿ ಜಿಲ್ಲಾ ಸಚಿವರಿಂದ ನೂತನ ಕಟ್ಟಡಗಳ ಉದ್ಘಾಟನೆ

| Published : Jan 21 2024, 01:33 AM IST

29ರಂದು ಭದ್ರಾವತಿಯಲ್ಲಿ ಜಿಲ್ಲಾ ಸಚಿವರಿಂದ ನೂತನ ಕಟ್ಟಡಗಳ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ, ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಜ.29ರಂದು ಸಂಜೆ 5.30 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಉದ್ಘಾಟನೆ, ಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿದ್ಯಾಸಂಸ್ಥೆ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಭದ್ರಾವತಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಭದ್ರಾವತಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ, ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಜ.29ರಂದು ಸಂಜೆ 5.30 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಉದ್ಘಾಟನೆ, ಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಸಂಸ್ಥೆ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ತಾಲೂಕಿನ ಸರ್ಕಾರಿ ನೌಕರರಿಗೆ ಕಾರ್ಯಾಗಾರ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತ ಸಭಾಂಗಣ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಬಳಸಿ ಸುಮಾರು ₹1.30 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸಭಾಂಗಣ ನೂತನ ಕಟ್ಟಡದಲ್ಲಿ ನಿರ್ಮಿಸಲಾಗಿದೆ. ಸಭಾಂಗಣ 250ರಿಂದ 300 ಆಸನ ವ್ಯವಸ್ಥೆ ಹೊಂದಿದ್ದು, ಹವಾನಿಯಂತ್ರಿತ (ಎ.ಸಿ) ಸೌಲಭ್ಯದೊಂದಿಗೆ ಅತ್ಯಾಧುನಿಕ ಉಪಕರಣಗಳನ್ನು ಸಹ ಒಳಗೊಂಡಿದೆ ಎಂದರು.

ಶಾಸಕರಿಗೆ ಮನವಿ:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಶನಿವಾರ ಮನವಿ ಸಲ್ಲಿಸಲಾಗಿದ್ದು, ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೇ ಪಿಂಚಣಿ ಯೋಜನೆ ಮರುಜಾರಿ ಹಾಗೂ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸೇರಿದಂತೆ ಒಟ್ಟು 3 ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ತಾಲೂಕಿನ ಸರ್ಕಾರಿ ನೌಕರರ ಪರವಾಗಿ ಒತ್ತಾಯಿಸುವಂತೆ ಮನವಿಯಲ್ಲಿ ಕೋರಲಾಗಿದೆ ಎಂದರು.

ಶೌಚಾಲಯ ಸ್ವಚ್ಛತೆಗೆ ಅಗತ್ಯ ಕ್ರಮಕ್ಕೆ ಮನವಿ:

ಶಾಲಾ ಮಕ್ಕಳಿಂದ ಯಾವುದೇ ಕೆಲಸ ಮಾಡಿಸದಂತೆ ಈಗಾಗಲೇ ಶಿಕ್ಷಣ ಸಚಿವರು ಆದೇಶಿಸಿದ್ದಾರೆ. ಈ ನಡುವೆ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಿ, ಸಿಬ್ಬಂದಿ ನೇಮಕಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಶೌಚಾಲಯ ಸ್ವಚ್ಛತೆಗೆ ಸಂಬಂಧಿಸಿಂತೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಶಿಕ್ಷಣ ಸಚಿವರೊಂದಿಗೆ ಮತ್ತೊಮ್ಮೆ ಚರ್ಚಿಸಲಾಗಿದೆ. ಈ ಹಿನ್ನೆಲೆ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಗೌರವಾಧ್ಯಕ್ಷ ಆರ್.ಜನಾರ್ಧನ, ಉಪಾಧ್ಯಕ್ಷ ರಾಜ್‌ಕುಮಾರ್, ಕಾರ್ಯದರ್ಶಿ ಡಿ.ಎಸ್. ರಾಜಪ್ಪ, ಖಜಾಂಚಿ ಎಸ್.ಕೆ. ಮೋಹನ್, ಜಂಟಿ ಕಾರ್ಯದರ್ಶಿ ಆರ್.ಉಮಾ, ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಂಘದ ಅಧ್ಯಕ್ಷ ಎಸ್.ಟಿ. ಸುಧೀಂದ್ರ ರೆಡ್ಡಿ, ಉಪಾಧ್ಯಕ್ಷ ಎ.ತಿಪ್ಪೇಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಪೃಥ್ವಿರಾಜ್ಇ ನ್ನಿತರರು ಉಪಸ್ಥಿತರಿದ್ದರು.

- - - -ಡಿ20ಬಿಡಿವಿಟಿ2:

ಭದ್ರಾವತಿಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಕಚೇರಿಯಲ್ಲಿ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಪತ್ರಿಕಾಗೋಷ್ಠಿ ನಡೆಸಿದರು.