ಸಾರಾಂಶ
ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆಯು ಹೆಬ್ರಿ ಸ.ಆ. ಕೇಂದ್ರದಲ್ಲಿ ನಡೆಯಿತು. ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು. ಅರ್ಹ ರೋಗಿಗಳು ಘಟಕದ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ಜಿಲ್ಲಾಡಳಿತ, ಜಿ. ಪಂ. ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ ತಾಲೂಕು, ಗ್ರಾ.ಪಂ.ಹೆಬ್ರಿ, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ, ನೆಫ್ರೋ ಪ್ಲಸ್ ಇವರ ಸಹಯೋಗದೊಂದಿಗೆ ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆಯು ಹೆಬ್ರಿ ಸ. ಆ. ಕೇಂದ್ರದಲ್ಲಿ ಅ. 30 ರಂದು ನಡೆಯಿತು.ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದ ಅರ್ಹ ರೋಗಿಗಳು ಘಟಕದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆಯ ಡಿಎಸ್ ಒ ಡಾ.ನಾಗರತ್ನ, ಕಾರ್ಕಳ ತಾಲೂಕು ಪ್ರಭಾರ ತಾಲೂಕಾ ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ಸ. ಆ. ಕೇಂದ್ರ ಹೆಬ್ರಿಯ ಆಡಳಿತ ವೈದ್ಯಾಧಿಕಾರಿ ಡಾ. ಸಂತೋಷ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆ. ಜಿ, ಗ್ರಾ.ಪಂ. ಅಧ್ಯಕ್ಷರಾದ ತಾರಾನಾಥ್ ಬಂಗೇರ, ತಾ.ಪಂ. ಸದಸ್ಯ ರಮೇಶ್ ಕುಮಾರ್, ಆಸ್ಪತ್ರೆಯ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಹೆಬ್ರಿ ಗ್ರಾ.ಪಂ. ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.