ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ

| Published : Sep 06 2024, 01:12 AM IST

ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬೈಂದೂರು

ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಉಡುಪಿ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಅಭಿಪ್ರಾಯಪಟ್ಟರು.ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲಾ ಶುಭಾಶಂಸನೆಗೈದರು. ಎನ್‌ಎಸ್‌ಎಸ್‌ ಯೋಜನಾಧಿಕಾರಿ ಸುಗುಣ ಆರ್.ಕೆ., ಎನ್‌ಎಸ್‌ಎಸ್‌ ವಿದ್ಯಾರ್ಥಿ ನಾಯಕ ಪ್ರೀತಮ್ ನಾಯಕ್ ಉಪಸ್ಥಿತರಿದ್ದರು.

ಸಹನಾ ಖಾರ್ವಿ ಸ್ವಾಗತಿಸಿದರು. ಉಪನ್ಯಾಸಕ ವೆಂಕಟೇಶಮೂರ್ತಿ ಎನ್.ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಕ್ಷಿತ ವರದಿ ವಾಚಿಸಿದರು. ಧನ್ಯ ಯು. ಅತಿಥಿಗಳನ್ನು ಪರಿಚಯಿಸಿದರು. ಭಾರತಿ ಖಾರ್ವಿ ನಿರೂಪಿಸಿದರು. ಶ್ರೇಷ್ಠ ಮೇಸ್ತ ವಂದಿಸಿದರು.