ವೈಕುಂಠ ಬಾಳಿಗಾ ಲಾ ಕಾಲೇಜಲ್ಲಿ ಎನ್ಎಸ್ಎಸ್, ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

| Published : Nov 23 2024, 12:35 AM IST

ವೈಕುಂಠ ಬಾಳಿಗಾ ಲಾ ಕಾಲೇಜಲ್ಲಿ ಎನ್ಎಸ್ಎಸ್, ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ೨೦೨೪-೨೫ನೇ ಸಾಲಿನ ಉದ್ಘಾಟನಾ ಸಮಾರಂಭ ನ.೨೨ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ೨೦೨೪-೨೫ನೇ ಸಾಲಿನ ಉದ್ಘಾಟನಾ ಸಮಾರಂಭ ನ.೨೨ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಉಡುಪಿಯ ಭಾರತೀಯ ರೆಡ್‌ಕ್ರಾಸ್ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆಯ ಮಾಜಿ ರಾಜ್ಯ ಯೋಜನಾಧಿಕಾರಿ ಡಾ. ಗಣನಾಥ್ ಎಕ್ಕಾರು ಹಾಗೂ ಕಾರ್ಕಳದ ವಕೀಲ ಸರ್ವಜ್ಞ ತಂತ್ರಿ ಕಾರ್ಯಕ್ರಮವನ್ನು ಸಂಯುಕ್ತವಾಗಿ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ.ರಘುನಾಥ್‌, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ನಿರ್ದೇಶಕಿ ಪ್ರೊ. ಡಾ.ನಿರ್ಮಲ ಕುಮಾರಿ ಕೆ. ಮಾತನಾಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸುರೇಖಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜನಾಧಿಕಾರಿ, ಎನ್‌ಎಸ್‌ಎಸ್ ಘಟಕದ ಡಾ. ಸಿ.ಬಿ.ನವೀನ್ ಚಂದ್ರ ಹಾಗೂ ರೆಡ್ ಕ್ರಾಸ್ ಘಟಕದ ಆನ್ಸಿ ಪ್ಲೋರ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ರೆಡ್‌ಕ್ರಾಸ್ ವಿದ್ಯಾರ್ಥಿ ಕಾರ್ಯದರ್ಶಿ ಮಂಜುನಾಥ್ ಸ್ವಾಗತಿಸಿದರು. ಎನ್‌ಎಸ್‌ಎಸ್‌ನ ವಿದ್ಯಾರ್ಥಿ ಕಾರ್ಯದರ್ಶಿ ಅಶೋಕ ಆರ್. ವಂದಿಸಿದರು. ಬಸವರಾಜ್ ಮತ್ತು ನಂದನ್ ರೈಮಂಡ್ ಮಚಾಡೊ ಅತಿಥಿಗಳನ್ನು ಪರಿಚಯಿಸಿದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.