ಸಾರಾಂಶ
ಪ್ರೀ ನರ್ಸರಿ ಮತ್ತು ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ತಾಯಿ ಮಲ್ಲಿಕಾ ಬೋಪಣ್ಣ ಉದ್ಘಾಟಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕಿನ ಗರಗಂದೂರು ಡಿ ಚೆನ್ನಮ್ಮ ಎಜುಕೇಶನ್ ಸೊಸೈಟಿ ವತಿಯಿಂದ ಪ್ರೀ ನರ್ಸರಿ ಮತ್ತು ಎಲ್ ಕೆ ಜಿ, ಯುಕೆಜಿ ತರಗತಿಗಳನ್ನು ಬುಧವಾರ ಖ್ಯಾತ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ತಾಯಿ ಮಲ್ಲಿಕಾ ಬೋಪಣ್ಣ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಸಿಪಿ ಬಿ.ಎ. ಪೂಣಚ್ಚ ಜ್ಯೋತಿ ಬೆಳಗುವುದರ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅವಶ್ಯಕತೆ ಇದೆ. ಜಗತ್ತಿನ ಸಂಪರ್ಕ ಭಾಷೆಯಾದ ಇಂಗ್ಲಿಷ್ ಭಾಷೆಯ ಮಹತ್ವವನ್ನು ಹೆಚ್ಚಾಗಿದೆ. ಮಾದಾಪುರದ ಸುತ್ತಲಿನ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಆಂಗ್ಲ ಮಾಧ್ಯಮದ ಶಾಲೆಯನ್ನು ತೆರೆದಿರುವುದು ಉತ್ತಮ ಕಾರ್ಯ ಎಂದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಇಂದಿನ ಜೀವನಕ್ಕೆ ಆಂಗ್ಲ ಮಾಧ್ಯಮದ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಎಲ್‌ಕೆಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕರಾದ ತೆಕ್ಲ ಅವರು ಪೋಷಕರಿಗೆ ಶಾಲಾ ಸಮಯ ಶಾಲಾ ಬಸ್ ನ ಸೌಲಭ್ಯ ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಉಪನ್ಯಾಸಕ ರಾಜ ಸುಂದರಂ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರೀಟಾ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಆಡಳಿತ ಮಂಡಳಿಯ ಸದಸ್ಯರು ಇದ್ದರು.