ನಮ್ಮ ದೇಶ ಕೃಷಿ ಪ್ರಧಾನವಾಗಿದೆ, ಗ್ರಾಮೀಣ ಭಾಗದ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯನ್ನೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ರೈತರಿಗೆ ಆತನ ಜಾನುವಾರುಗಳು ಆಧಾರಸ್ತಂಭವಾಗಿವೆ, ಅವುಗಳಿಗೆ ಹಲವಾರು ಸಮಯದಲ್ಲಿ ರೋಗಗಳು ಬರುವುದು ಸ್ವಾಭಾವಿಕ, ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಪಶು ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
- ಜಾನುವಾರುಗಳ ಚಿಕಿತ್ಸೆಗೆ ಅನುಕೂಲ: ಶಾಸಕ ತುನ್ನೂರು । ₹49 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣಕನ್ನಡಪ್ರಭ ವಾರ್ತೆ ಯಾದಗಿರಿ
ನಮ್ಮ ದೇಶ ಕೃಷಿ ಪ್ರಧಾನವಾಗಿದೆ, ಗ್ರಾಮೀಣ ಭಾಗದ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯನ್ನೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ರೈತರಿಗೆ ಆತನ ಜಾನುವಾರುಗಳು ಆಧಾರಸ್ತಂಭವಾಗಿವೆ, ಅವುಗಳಿಗೆ ಹಲವಾರು ಸಮಯದಲ್ಲಿ ರೋಗಗಳು ಬರುವುದು ಸ್ವಾಭಾವಿಕ, ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಪಶು ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಪಶು ಚಿಕಿತ್ಸಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಅನ್ನ ನೀಡುವರು ರೈತರು ಅವರಿಗೆ ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ಕೈಗೊಳ್ಳಲು ನಿಸರ್ಗ ಸಹಕಾರ ನೀಡಿದಾಗ ಮಾತ್ರ ಅವರು ಸ್ವಲ್ಪಮಟ್ಟಿಗೆ ಕುಟುಂಬದೊಂದಿಗೆ ನೆಮ್ಮದಿಯಿಂದ ಇರಲು ಸಾಧ್ಯ, ಆ ದೇವರು ಸಕಾಲದಲ್ಲಿ ಮಳೆ-ಬೆಳೆ ಅವರಿಗೆ ಸಿಗಲಿ ಎಂದು ತಿಳಿಸಿದರು.
ರೈತರು ಕೃಷಿಯೊಂದಿಗೆ ಉಪಕಸುಬುಗಳಾದ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮಾಡುವ ಮೂಲಕ ಆರ್ಥಿಕವಾಗಿ ಬದಲಾವಣೆ ಸಾಧಿಸಬೇಕು ಎಂದು ಸಲಹೆ ನೀಡಿದರು.ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ರಾಜಶೇಖರ ಕಾಸಬಾಗ ಮಾತನಾಡಿ, ಅನೇಕ ಆಸ್ಪತ್ರೆಗಳಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆಯಿದೆ, ನೇಮಕಕ್ಕೆ ಕ್ರಮ ಕೈಗೊಂಡು ರೈತರಿಗೆ ಇನ್ನೂ ಹೆಚ್ಚು ಸೇವೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಡಾ. ಸುಭಾಶ್ಚಂದ್ರ ಟಕ್ಕಳಕಿ, ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪ ಬಾಗ್ಲಿ, ಬಾಬುಗೌಡ ಪಾಟೀಲ್, ನಾಗಣಗೌಡ ಹಳಿಗೇರಾ, ವಾಸುದೇವ ದನಕಾಯಿ, ಭಾಸ್ಕರ್, ಮಲ್ಲಿಕಾರ್ಜುನ ಜಲ್ಲಪ್ಪನೋರ, ಗೋಪಾಲ ಚವ್ಹಾಣ, ಚಂದಪ್ಪ ದಂಡಯ್ಯನೋರ, ಮರೆಪ್ಪ ದುಗನೂರ, ಹಣಮಂತ ಮ್ಯಾಗಳೋರ, ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.-
16ವೈಡಿಆರ್5 : ಯಾದಗಿರಿ ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಪಶು ಚಿಕಿತ್ಸಾಲಯ ಕಟ್ಟಡವನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಿ ಮಾತನಾಡಿದರು.---000---