ಕೃಷ್ಣನಗರದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ನೂತನ ಕಚೇರಿ ಉದ್ಘಾಟನೆ

| Published : Sep 01 2024, 02:03 AM IST

ಸಾರಾಂಶ

1965ರಿಂದಲೂ ಸಮಾಜದ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿ ರಾಷ್ಟ್ರೋತ್ಥಾನ ಪರಿಷತ್ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಗೋವುಗಳ ಸಂರಕ್ಷಣೆ, ಯೋಗ ಶಾಲೆ, ಆಸ್ಪತ್ರೆ, ರಕ್ತ ಕೇಂದ್ರ, ಸಂಸ್ಕೃತಿ ಸಂಸ್ಕಾರ ನೀಡುವಲ್ಲಿ ಸಮಾಜಮುಖಿಯಾಗಿ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಪ್ರಸಾರ ಭಾರತಿ ವತಿಯಿಂದ ಪುಸ್ತಕಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ನಿಡಲಾಗುತ್ತಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಇವರ ವತಿಯಿಂದ ನಗರದ ಕೃಷ್ಣ ನಗರದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಇವರ ವತಿಯಿಂದ ನಗರದ ಕೃಷ್ಣ ನಗರದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಲಾಯಿತು.

ಶನಿವಾರ ಬೆಳಿಗ್ಗೆಯಿಂದ ವಿಶೇಷ ಪೂಜೆ ಕಾರ್ಯಕ್ರಮ ನಡೆದು, ನಂತರ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಮಲೆ ಮಹದೇಶ್ವರ ಬೆಟ್ಟದ ಧರ್ಮದರ್ಶಿಗಳು ಹಾಗೂ ಮಠಾಧೀಶರಾದ ಶ್ರೀ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ರಾಷ್ಟ್ರೋತ್ಥಾನ ಪರಿಷತ್ ಸ್ವಸ್ಥ - ಸುಸ್ಥಿರ ಸಮಾಜದ ನಿರ್ಮಾಣಕ್ಕೆ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಭಾರತದ ನೈಜ ಇತಿಹಾಸ ಸಂಸ್ಕೃತಿ ಸಾಮರಸ್ಯ ಪರಂಪರೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಸಾಹಿತ್ಯ, ಶಿಕ್ಷಣ, ಆರೋಗ್ಯ, ಸೇವಾ ಕಾರ್ಯ ಒಳಗೊಂಡಂತೆ ಸಮಾಜದ ಅಭಿವೃದ್ಧಿಗೆ ಸಮಾಜ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಶ್ಲಾಘಿಸಿದರು.

ರಾಷ್ಟ್ರೋತ್ಥಾನ ಪರಿಷತ್‌ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆರವರು ದೀಪ ಹಚ್ಚುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1965ರಿಂದಲೂ ಸಮಾಜದ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿ ರಾಷ್ಟ್ರೋತ್ಥಾನ ಪರಿಷತ್ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಗೋವುಗಳ ಸಂರಕ್ಷಣೆ, ಯೋಗ ಶಾಲೆ, ಆಸ್ಪತ್ರೆ, ರಕ್ತ ಕೇಂದ್ರ, ಸಂಸ್ಕೃತಿ ಸಂಸ್ಕಾರ ನೀಡುವಲ್ಲಿ ಸಮಾಜಮುಖಿಯಾಗಿ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಪ್ರಸಾರ ಭಾರತಿ ವತಿಯಿಂದ ಪುಸ್ತಕಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ನಿಡಲಾಗುತ್ತಿದೆ ಎಂದು ತಿಳಿಸಿದರು.ಕರ್ನಾಟಕದಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಶಾಲೆಗಳನ್ನು ನಡೆಸುತ್ತಿದ್ದು, ಹಾಸನದಲ್ಲಿ 15ನೇ ಶಾಲೆಯನ್ನು 2025-26 ನೇ ಸಾಲಿಗೆ ಆರಂಭಿದಿ ಮಕ್ಕಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಪೂರ್ವ ಪ್ರಾಥಮಿಕದಿಂದ 6ನೇ ತರಗತಿ ವರೆಗೆ ಪ್ರಾರಂಭಮಾಡಿ 10ನೇ ತರಗತಿವರೆಗೆ ಶಾಲೆ ನಡೆಸಲಾಗುವುದು ಎಂದು ತಿಳಿಸಿದರು. 2025ರ ಮಾರ್ಚ್ ನಲ್ಲಿ ಶಾಲಾ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ಹೇಳಿದರು. 2025-26ರ ಸಾಲಿಗೆ ಮಕ್ಕಳ ನೋಂದಣಿ ಪ್ರಕ್ರಿಯೆ ಇದೆ ಅಕ್ಟೋಬರ್ 2024 ಪ್ರಾರಂಭವಾಗಲಿದೆ.ಸಮಾಜ ಕಟ್ಟವ ಕಾರ್ಯದಲ್ಲಿ ಮಾದರಿ ಸಂಸ್ಥೆಯಾಗಿ ರೂಪಿಸುವ ನಿಟ್ಟಿನಲ್ಲಿ ವಿದ್ಯಾ ಕೇಂದ್ರವನ್ನು ಪ್ರಾರಂಭಿಸುವ ಗುರಿ ಹೊಂದಿದ್ದೆವೆ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಧನಪಾಲ್ ಮಾತಾನಾಡಿ, ಇಂತಹ ಸೇವಾ ಕಾರ್ಯಕ್ಕೆ ನಮ್ಮ ಸಹಕಾರ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಲಾ. ನಾ ಶಾಸ್ತ್ರೀ, ಹಾಸನ ಮಾಜಿ ಹುಡಾ ಅಧ್ಯಕ್ಷರಾದ ನವೀಲೆ ಅಣ್ಣಪ್ಪ, ಸಮಾಜ ಸೇವಕರಾದ ವೇಣುಗೋಪಾಲ್, ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಮಧುಸೂದನ್ ಆಡಳಿತ ಅಧಿಕಾರಿಗಳು ರಾಷ್ಟ್ರೋತ್ಥಾನ ಪರಿಷತ್ ಹಾಸನ, ಯು.ಎಸ್ . ಬಸವರಾಜು, ಮಹೇಶ್ ‌ವಸಂತ್, ಪವನ್, ನಿವೇದಿತಾ ಶಾಲೆಯ ಆಡಳಿತ ಮಂಡಳಿ ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.