ವಸತಿಯುತ ಪ್ರೇರಣಾ ಶಿಬಿರ ಉದ್ಘಾಟನೆ

| Published : Jan 29 2025, 01:34 AM IST

ವಸತಿಯುತ ಪ್ರೇರಣಾ ಶಿಬಿರ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರ ಜ. 27ರಂದು ಶಿರಸಿಯ ಲಯನ್ಸ್‌ ಪ್ರೌಢಶಾಲಾ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರ ಜ.27 ರಂದು ಶಿರಸಿಯ ಲಯನ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಂ.ಎಸ್ ಪ್ರಸನ್ನಕುಮಾರ್‌ ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕ ಗಣಪತಿ ಭಟ್‌ ಕೆ.ಎಸ್‌. ಮಾತನಾಡಿ, ಎಸ್.ಎಸ್.ಎಲ್.ಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಡಯಟ್ ಶಿರಸಿ ಯ ಪ್ರಾಚಾರ್ಯ ಎಂ.ಎಸ್ ಹೆಗಡೆ, ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲಯನ್ ಲೋಕೇಶ್ ಹೆಗಡೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ರಾಮಕೃಷ್ಣ ಸ್ಟುಡೆಂಟ್ ಹೋಮ್ ವ್ಯವಸ್ಥಾಪಕ ಮುರಾರಿ ಭಟ್, ಶಿರಸಿ ಲಯನ್ಸ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಶಾಂಕ್ ಹೆಗಡೆ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ 6 ತಾಲೂಕಿನ ಕನ್ನಡ ಮತ್ತು ಆಂಗ್ಲ ಮಾಧ್ಯಮ ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕ ಪೋಷಕರು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಕಾರ್ಕಳದ ಪಿ ಆರ್ ಓ ಲಿಶಾನ್‌ಗೌಡ ಮತ್ತಿತರರು ಪಾಲ್ಗೊಂಡಿದ್ದರು.