ರೋಟರಿ ಮಡಿಕೇರಿ ಇಂಟರ‍್ಯಾಕ್ಟ್ ಕ್ಲಬ್ ಪದಾಧಿಕಾರಿ ಪದಗ್ರಹಣ

| Published : Sep 20 2024, 01:42 AM IST

ರೋಟರಿ ಮಡಿಕೇರಿ ಇಂಟರ‍್ಯಾಕ್ಟ್ ಕ್ಲಬ್ ಪದಾಧಿಕಾರಿ ಪದಗ್ರಹಣ
Share this Article
  • FB
  • TW
  • Linkdin
  • Email

ಸಾರಾಂಶ

ರೋಟರಿ ಮಡಿಕೇರಿ ಸಂಸ್ಥೆಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರಾಕ್ಟ್ ಕ್ಲಬ್‌ ಪದಗ್ರಹಣ ಸಮಾರಂಭ ನಡೆಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಇಂಟರಾಕ್ಟ್‌ ಕ್ಲಬ್‌ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಮಿಥುನ್ ಪೂವಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೆ.ಅನುಷಾ ಅಧಿಕಾರ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪಿ.ಡಿ.ಜಿ.ರೋಟರಿಯನ್ ಡಾ.ಕೆ.ರವಿ ಅಪ್ಪಾಜಿ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಕ್ಲಬ್‌ನ 25 ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಸಂಸ್ಥೆ ಅಧ್ಯಕ್ಷ ಎಂ.ಸುದಯ್ ನಾಣಯ್ಯ ಅವರು, 1950 ರಲ್ಲಿ ರೋಟರಿ ಸಂಸ್ಥೆ ಸ್ಥಾಪನೆಯಾಗಿದೆ, ರೋಟರಿ ಮೂಲಕ ಅದರ ಸದಸ್ಯರು ತಾವು ಬೆಳೆದು ಬಂದ ಪರಿಸರಕ್ಕೆ ತಮ್ಮ ಕೈಯಲ್ಲಾದ ಸಮಾಜ ಸೇವೆಗಳನ್ನು ಮಾಡುತ್ತಾ ಬಂದಿದ್ದಾರೆ. ಆಸ್ಟ್ರೇಲಿಯಾದ ಮೆಲ್‌ಬೋರ್ನ್ ನಲ್ಲಿ ಪ್ರಥಮ ಇಂರ‍್ಯಾಕ್ಟ್ ಕ್ಲಬ್ ಸ್ಥಾಪನೆಯಾಯಿತು. ಇಂದು ಪ್ರಪಂಚದ 145 ದೇಶಗಳಲ್ಲಿ 1,490 ಇಂಟರ‍್ಯಾಕ್ಟ್ ಕ್ಲಬ್ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಾಲೇಜ್ ನ ಪ್ರಾಂಶುಪಾಲ ವಿಜಯ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡು ಇಂಟರ‍್ಯಾಕ್ಟ್ ಕ್ಲಬ್ ಮೂಲಕ ಹೆಚ್ಚು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ರೋಟರಿ ಕ್ಲಬ್‌ನ ಯೂತ್ ಸರ್ವಿಸ್ ಡೆರೆಕ್ಟರ್ ರೋಟರಿಯನ್ ಕೆ.ಸಿ.ಕಾರ್ಯಪ್ಪ, ರೋಟರಾಕ್ಟ್ ಚೇರ್‌ಮೆನ್ ಸಿ.ಟಿ.ಮಂದಣ್ಣ, ರೋಟರಿಯನ್ ಲಲಿತಾ ರಾಘವನ್, ರೋಟರಿಯನ್ ಎನ್.ಪಿ.ಚೀಯಣ್ಣ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಂರ‍್ಯಾಕ್ಟ್ ಕ್ಲಬ್‌ನ ಸಂಯೋಜಕ ಸೋನಾ ಚೋಂದಮ್ಮ ಇದ್ದರು. ಇಂರ‍್ಯಾಕ್ಟ್ ಕ್ಲಬ್ ನ ಸದಸ್ಯರು ನಿರೂಪಿಸಿದರು.