11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ

| Published : Feb 09 2024, 01:46 AM IST

11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನಾ ಸಮಾರಂಭವನ್ನು ಫೆ.11ರಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ರಂಗಯ್ಯನಬಾಗಿಲು ಸಮೀಪದ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ವತಿಯಿಂದ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನಾ ಸಮಾರಂಭವನ್ನು ಫೆ.11ರಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ರಂಗಯ್ಯನಬಾಗಿಲು ಸಮೀಪದ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಾವೇರಿ ನರಸೀಪುರ ಸುಕ್ಷೇತ್ರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ದಿವ್ಯಸಾನ್ನಿಧ್ಯವಹಿಸುವರು. ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಮಾರಂಭ ಉದ್ಘಾಟನೆ ನೆರವೇರಿಸುವರು. ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಸಮುದಾಯ ಭವನ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್.ತಂಗಡಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು.

ಮಾಜಿ ಸಚಿವ ಎಚ್.ಆಂಜನೇಯ ನಾಮಫಲಕದ ಉದ್ಘಾಟನೆ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ರಾಜ್ಯಾಧ್ಯಕ್ಷ ಬಿ.ಮೌಲಾಲಿ ಅವರು ಗಂಗಾಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪುಷ್ಪಾರ್ಚನೆ ನೆರವೇರಿಸುವರು. ಗೌರವಾನ್ವಿತ ಆಹ್ವಾನಿತರಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಚಿತ್ರದುರ್ಗ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಎಚ್.ಡಿ.ರಂಗಯ್ಯ ಅಧ್ಯಕ್ಷತೆ ವಹಿಸುವರು. ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ತಿಪ್ಪಣ್ಣ ಕಮ್ಮಕನೂರು, ಸಾಯಿಬಣ್ಣ ತಳವಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಿರಿಗೆರೆ ತರಳಬಾಳು ಬೃಹನ್ಮಠದ ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಂಗನಾಥ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್.ಎನ್.ಗಂಗಾಧರಯ್ಯ, ರಾಜ್ಯ ಗಂಗಾಮತಸ್ಥ ನೌಕರರ ಸಂಘ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ್ ಭಾಗವಹಿಸುವರು.

ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಡಿ.ಎನ್.ಬಾಲಕೃಷ್ಣ, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಆರ್.ನಾಗರಾಜಪ್ಪ, ಕೆಇಬಿ ನಿವೃತ್ತ ಅಧೀಕ್ಷಕ ಡಿ.ಶಿವಲಿಂಗಪ್ಪ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಸಹಾಯಕ ಆಯುಕ್ತ ಎಸ್.ಮಂಜುನಾಥ್, ನಿವೃತ್ತ ಸಹಾಯಕ ಕಾರ್ಯದರ್ಶಿ ಆರ್.ಪ್ರಕಾಶ್, ನಿವೃತ್ತ ಸಹ ಪ್ರಾಧ್ಯಾಪಕ ಎನ್.ಎಚ್.ರಂಗಪ್ಪ, ಸಿಂಡಿಕೇಟ್ ಬ್ಯಾಂಕ್‍ನ ನಿವೃತ್ತ ನೌಕರ ಜಿ.ರಂಗಸ್ವಾಮಿ, ಪಿಎಂಜಿಎಸ್‍ವೈ ಕಾರ್ಯಪಾಲಕ ಅಭಿಯಂತರ ಈ.ಶ್ರೀಧರ್, ಚಿತ್ರದುರ್ಗ ಉಪನೋಂದಣಾಧಿಕಾರಿ ಎಲ್.ರಾಮಕೃಷ್ಣ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ದೊರೆಸ್ವಾಮಿ, ಚಿತ್ರದುರ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಹನುಮಂತಪ್ಪ, ದಾವಣಗೆರೆ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಎಂ.ಮಂಜುನಾಥ, ರಾಜ್ಯ ಗುಪ್ತವಾರ್ತೆ ನಿರ್ದೇಶಕ ಎಂ.ನಂದಗಾವ್, ಪಾಲ್ಗೊಳ್ಳುವರು.