ಸಾರಾಂಶ
ವಿಜಯಪುರ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಸ್ಮರಣಾರ್ಥ 2.5 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಆವರಣದಲ್ಲಿನ ಉದ್ಯಾನವನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಸ್ಮರಣಾರ್ಥ 2.5 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಆವರಣದಲ್ಲಿನ ಉದ್ಯಾನವನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಮಾತನಾಡಿ ಸಚಿವ ಎಂ ಬಿ ಪಾಟೀಲ್, 2.5 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಈ ಉದ್ಯಾನವನದಲ್ಲಿ ಹುಲ್ಲು ಹಾಸು, ಅಲಂಕಾರಿಕ ಬದು, ನೆಲಹಾಸು, ಗಿಡಗಳು, ಮಕ್ಕಳ ಆಟಿಕೆ ಸಾಮಗ್ರಿಗಳು, ಆಸನಗಳು, ನಾಮಫಲಕಗಳನ್ನು ಅಳವಡಿಸಿ ಸುಂದರ ಉದ್ಯಾನವನ ಅಭಿವೃದ್ದಿಪಡಿಸಲಾಗಿದೆ. ಸಾರ್ವಜನಿಕರು ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರುನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಯರ್ ಮಹೇಜಬಿನ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಆರ್.ಸಿ.ಎಚ್ ಡಾ.ಕೆ.ಡಿ.ಗುಂಡಬಾವಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.