ಸಾರಾಂಶ
ಸುಕ್ಷೇತ್ರಾಧ್ಯಕ್ಷರ ದಿವ್ಯ ಸಾನಿಧ್ಯ । ಸಿದ್ಧಗಂಗಾ ಶ್ರೀಗಳ ಆಶೀರ್ವಚನ । ಪ್ರಾಣೇಶ್ ,ಸಂಗಡಿಗರ ನಗೆಹಬ್ಬ
ಕನ್ನಡಪ್ರಭ ವಾರ್ತೆ ತಿಪಟೂರುತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಶ್ರೀ ಗುರು ಸಪ್ತಾಹ, ಶ್ರೀ ರಂಗನಾಥ ಸ್ವಾಮಿಯವರ ನವೀಕೃತ ದೇವಾಲಯ ಪ್ರಾರಂಭೋತ್ಸವ, ನೂತನ ಶಿಖರಕ್ಕೆ ಕಳಶ ಪ್ರತಿಷ್ಠಾಪನೆ, ನೂತನ ರಥದ ಲೋಕಾರ್ಪಣೆ ಮಹೋತ್ಸವ ಹಾಗೂ ನೂತನ ಬೃಹತ್ ಬಯಲು ರಂಗಮಂದಿರದ ಉದ್ಘಾಟನಾ ಸಮಾರಂಭವು ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಫೆ. 14 , 15 ರಂದು ನಡೆಯಲಿದೆ.
ಫೆ. 14ರಂದು ಧಾರ್ಮಿಕ ಸಮಾರಂಭ ನಡೆಯಲಿದ್ದು ಸಾನಿಧ್ಯವನ್ನು ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆ ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ಗೋಡೇಕೆರೆ ಶ್ರೀ ಮೃತ್ಯುಂಜಯದೇಶಿಕೇಂದ್ರ ಸ್ವಾಮೀಜಿ, ಅರಸೀಕೆರೆ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಲೋಕಸಭಾ ಸದಸ್ಯ ಜಿ.ಎಸ್. ಬಸವರಾಜು ಉದ್ಯಾನವನ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಕೆ. ಷಡಕ್ಷರಿ ವಹಿಸಲಿದ್ದಾರೆ. ನಂತರ ಭಾರತೀಯ ನೃತ್ಯ ಕಲಾಶಾಲೆಯ ಪ್ರಾಂಶುಪಾಲರು, ಭರತನಾಟ್ಯ ವಿದೂಷಿ, ಅಂಬಳೆ ರಾಜೇಶ್ವರಿ ಮತ್ತು ತಂಡದವರಿಂದ ಜಾನಪದ ನೃತ್ಯ ಹಾಗೂ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಫೆ. 15ರಂದು ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿಯವರ ನೂತನ ರಥ ಲೋಕಾರ್ಪಣೆಯಾಗಲಿದೆ. ನಂತರ ಸಕಲ ಬಿರುದು ಬಾವಲಿಗಳೊಂದಿಗೆ ಶ್ರೀ ಶಂಕರೇಶ್ವರಸ್ವಾಮಿಯವರ ಉತ್ಸವ ನಡೆಯಲಿದೆ. ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ ವಿದ್ಯಾಪೀಠದ ಶಾಲಾ-ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದ್ದು, ಗೊಲ್ಲಹಳ್ಳಿಯ ಶ್ರೀ ವಿಭವ ವಿದ್ಯಾಶಂಕರ ದೇಶಿಕೇಂದ್ರ ಸ್ವಾಮೀಜಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ ಗಂಗಾವತಿ ಪ್ರಾಣೇಶ ಮತ್ತು ತಂಡದವರಿಂದ ನಗೆಹಬ್ಬ ಕಾರ್ಯಕ್ರಮ ಹಾಗೂ ವಿಶೇಷ ಮದ್ದಿನ ಪ್ರದರ್ಶನ ಏರ್ಪಡಿಸಲಾಗಿದೆ.
ಈ ಸಮಾರಂಭಕ್ಕೆ ವಿವಿಧ ಮಠಾಧೀಶರು, ಗಣ್ಯ ಮಾನ್ಯರು ಭಾಗವಹಿಸಲಿದ್ದು ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ರಂಗ-ಶಂಕರರ ಕೃಪೆಗೆ ಪಾತ್ರರಾಗಬೇಕೆಂದು ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.-----------
ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ.;Resize=(128,128))
;Resize=(128,128))
;Resize=(128,128))
;Resize=(128,128))