ಸಾರಾಂಶ
ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ನಿಡಸೋಸಿ ದುರದುಂಡೀಶ್ವರ ಸಂಸ್ಥಾನ ಮಠದ ಡಾ.ನಿಜಲಿಂಗೇಶ್ವರ ಸ್ವಾಮೀಜಿ, ಬೆಳಗಾವಿ ಆರ್ಷ ವಿದ್ಯಾ ಕೇಂದ್ರದ ಚಿತ್ಪ್ರಕಾಶಾನಂದ ಸಾನ್ನಿಧ್ಯ ವಹಿಸುವರು.
ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ನ.21ರಂದು ಬೆಳಗ್ಗೆ 11 ಗಂಟೆಗೆ ಅನಗೋಳದ ಸಂತಮೀರಾ ಶಾಲೆಯ ಮಾಧವಸಭಾಗೃಹದಲ್ಲಿ ನಡೆಯಲಿದೆ.
ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ನಿಡಸೋಸಿ ದುರದುಂಡೀಶ್ವರ ಸಂಸ್ಥಾನ ಮಠದ ಡಾ.ನಿಜಲಿಂಗೇಶ್ವರ ಸ್ವಾಮೀಜಿ, ಬೆಳಗಾವಿ ಆರ್ಷ ವಿದ್ಯಾ ಕೇಂದ್ರದ ಚಿತ್ಪ್ರಕಾಶಾನಂದ ಸಾನ್ನಿಧ್ಯ ವಹಿಸುವರು.ವಿಶೇಷ ಆಹ್ವಾನಿತರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಗೀತಾ ಅಭಿಯಾನದ ಗೌರವಾಧ್ಯಕ್ಷರೂ ಆಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ವಹಿಸಿಕೊಳ್ಳಲಿದ್ದಾರೆ. ಉದ್ಯಮಿ ಗೋಪಾಲ ಜಿನಗೌಡ, ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಉಪಸ್ಥಿತರಿರಲಿದ್ದಾರೆ ಎಂದು ಅಭಿಯಾನದ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಸಂಚಾಲಕ ಸುಬ್ರಹ್ಮಣ್ಯ ಭಟ್ಟ, ಕಾರ್ಯದರ್ಶಿ ಎಂ.ಕೆ.ಹೆಗಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.