ನಾಪೋಕ್ಲು: ಮೂರ್ನಾಡು ಪಿಯು ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು.ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕೃತ ಪಟ್ಟಿಗಳನ್ನು ತೊಡಿಸಿ, ಪ್ರತಿಜ್ಞಾ ವಿಧಿ ಬೋಧಿಸ ಲಾಯಿತು. ಲಯನ್ ಮುಲ್ಲೇರ ಕಾವೇರಪ್ಪ ಮತ್ತು ಸುನಿತಾ ಕಾವೇರಪ್ಪ ಮುಖ್ಯ ಅತಿಥಿಗಳಾಗಿದ್ದರು. ಎಂಇಎಸ್ ಅಧ್ಯಕ್ಷ ಚಿನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಹರೀಶ್ ದೇವಯ್ಯ, ಖಜಾಂಚಿ ಜಯ ಮುತ್ತಪ್ಪ, ನಿರ್ದೇಶಕ ಸುಬ್ಬಯ್ಯ, ಕಾಲೇಜಿನ ಪ್ರಾಂಶುಪಾಲ ದೇವಕಿ, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘದ ಮುಖ್ಯ ಸಂಯೋಜಕಿ ಅನುರಾಧಾ ಮತ್ತಿತರರಿದ್ದರು.

---------------------------------------------

ಮಡಿಕೇರಿ: ಕಲಾ ಪ್ರತಿಭೋತ್ಸವ ಮುಂದೂಡಿಕೆ

ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾ ಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ಮತ್ತು ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಲಾಗಿದೆ.

ಆ ದಿಸೆಯಲ್ಲಿ ಆ. 4 ಮತ್ತು 5ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ತಿಳಿಸಿದ್ದಾರೆ.