ಪರಿಸರ ಸಂರಕ್ಷಣೆ, ಜೀವ ವೈವಿಧ್ಯತೆ ಕಾಪಾಡುವುದು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹೆಬ್ರಿಯ ಎಸ್.ಆರ್. ಪಿಯು ಕಾಲೇಜಿನಲ್ಲಿ ‘ಗ್ರೀನ್ ಜೀನ್ ಕ್ಲಬ್’ ಅನ್ನು ಶನಿವಾರ ಬೆಳಗ್ಗೆ ಕಾಲೇಜಿನ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಪರಿಸರ ಸಂರಕ್ಷಣೆ, ಜೀವ ವೈವಿಧ್ಯತೆ ಕಾಪಾಡುವುದು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹೆಬ್ರಿಯ ಎಸ್.ಆರ್. ಪಿಯು ಕಾಲೇಜಿನಲ್ಲಿ ‘ಗ್ರೀನ್ ಜೀನ್ ಕ್ಲಬ್’ ಅನ್ನು ಶನಿವಾರ ಬೆಳಗ್ಗೆ ಕಾಲೇಜಿನ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಉದ್ಘಾಟಿಸಲಾಯಿತು.ಎಸ್.ಆರ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅವರು ತುಳಸಿ ಗಿಡಕ್ಕೆ ನೀರುಣಿಸುವ ಮೂಲಕ ಕ್ಲಬ್‌ಗೆ ಚಾಲನೆ ನೀಡಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಮರಗಳನ್ನು ನೆಟ್ಟು ಅವುಗಳ ಪಾಲನೆ-ಪೋಷಣೆ ಮಾಡುವುದರ ಜೊತೆಗೆ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್.ಆರ್. ಪಬ್ಲಿಕ್ ಸ್ಕೂಲ್‌ನ ಸಹ ಶಿಕ್ಷಕರಾದ ವಿನಯ ವೈದ್ಯ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರೀನ್ ಜೀನ್ ಕ್ಲಬ್ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಶಾಂತ ಹೆಬ್ರಿ ವಹಿಸಿದ್ದರು. ಕ್ಲಬ್‌ನ ಸಂಯೋಜಕ ಶುಭಲಕ್ಷ್ಮಿ ಹಾಗೂ ಸಹ-ಸಂಯೋಜಕ ಶುಭಾ ಎಂ. ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿ ಅಭಿನವ ಐತಾಳ್ ತುಳಸಿ ಗಿಡದ ಮಹತ್ವ ಮತ್ತು ಬಳಕೆ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಗ್ರೀನ್ ಜೀನ್ ಕ್ಲಬ್‌ನ ಕಾರ್ಯದರ್ಶಿ ಪೂರ್ವಿ ಕಾರ್ಯಕ್ರಮ ನಿರೂಪಿಸಿ, ಅಮೂಲ್ಯ ವಂದಿಸಿದರು.