ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎ.ಎಸ್. ಪೊನ್ನಣ್ಣ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.

ಕೊಣಂಜಗೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಪಾಡೆಯಂಡ ಕಟ್ಟಿ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಪಂಚಾಯಿತಿಯ ಸದಸ್ಯರು, ಪಕ್ಷಗಳ ಮುಖಂಡರು , ಬ್ಲಾಕ್ ಅಧ್ಯಕ್ಷರು ಕೆ ಎ ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷ ಶೇರಿ ಗಿರೀಶ್, ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.