ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ಉದ್ಘಾಟನೆ

| Published : Apr 06 2025, 01:48 AM IST

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರಿನಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.

ಜಿಲ್ಲೆಯವರು ಪ್ರಮುಖ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು: ಶಾಸಕ ಅಶೋಕ್ ಕುಮಾರ್ ರೈ

ಕನ್ನಡಪ್ರಭ ವಾರ್ತೆ ಪುತ್ತೂರು

ಜಿಲ್ಲೆಯ ವಿವಿಧ ಇಲಾಖೆಗಳಿಗೆ ಇತರ ಜಿಲ್ಲೆಗಳಿಂದ ಉದ್ಯೋಗ ಪಡೆದುಕೊಂಡು ಬಂದವರು ಸ್ವಲ್ಪ ಸಮಯ ಕೆಲಸ ಮಾಡಿ ಬಳಿಕ ಅವರ ಹುಟ್ಟೂರಿಗೆ ವರ್ಗಾವಣೆ ಪಡೆದುಗೊಂಡು ಹೋಗುತ್ತಾರೆ. ಹೀಗಾಗಿ ಜಿಲ್ಲೆಯಲ್ಲಿ ಹಲವು ಬಾರಿ ಸಮಸ್ಯೆಗಳು ಕಾಡುತ್ತದೆ. ಇದನ್ನು ತಡೆಯಲು ಜಿಲ್ಲೆಯವರು ಪ್ರಮುಖ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು. ಅದಕ್ಕಾಗಿ ಜಿಲ್ಲೆಯವರೇ ಕೆಲಸಕ್ಕೆ ಸೇರಿಕೊಂಡು ಸೇವೆ ಸಲ್ಲಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ವೈ.ಶಿವರಾಮಯ್ಯ ಮಾತನಾಡಿದರು. ಪುತ್ತೂರು ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಮನಗರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸುಂದರ ಗೌಡ ಮಾತನಾಡಿದರು.ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಅಧ್ಯಕ್ಷ ವಸಂತ ಮೂಲ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಅಬ್ರಹಾಂ ಎಸ್.ಎ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ನಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.ಗಣ್ಯರಿಗೆ ಸನ್ಮಾನ:ಈ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ, ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೈ. ಶಿವರಾಮಯ್ಯ, ಕಟ್ಟಡದ ಎಂಜಿನಿಯರ್ ಸಂದೀಪ್, ಗುತ್ತಿಗೆದಾರ ಕುಂಞಕೋಯ, ನಗರ ಯೋಜನಾ ಪ್ರಾಧೀಕಾರ ಅಧ್ಯಕ್ಷ ಅಮಳ ರಾಮಚಂದ್ರ, ತಹಸೀಲ್ದಾರ್ ಪುರಂದರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ರಾಮನಗರ ಜಿಲ್ಲೆಗೆ ವರ್ಗಾವಣೆಗೊಂಡಿರುವ ಸುಂದರ ಗೌಡ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಲ್ಯಾಪ್‌ಟಾಪ್ ವಿತರಣೆ:೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅತ್ಯಧಿಕ ಅಂಕಪಡೆದ ವಿದ್ಯಾರ್ಥಿಗಳಾದ ಕೆಯ್ಯೂರು ಕೆಪಿಎಸ್‌ನ ಸೌಜನ್ಯ ರೈ, ಕೊಂಬೆಟ್ಟು ಪ್ರೌಢಶಾಲೆಯ ಲವಿತಾ, ಉಪ್ಪಿನಂಗಡಿ ಪ್ರೌಢಶಾಲಾ ಅರ್ಪಿತಾ ಎ., ಪಾಪೆಮಜಲು ಶಾಲಾ ಭವ್ಯಶ್ರೀ ಹಾಗೂ ಕೊಂಬೆಟ್ಟು ಪ್ರೌಢಶಾಲಾ ಪವಿತ್ರ ಅವರಿಗೆ ಲ್ಯಾಪ್‌ಟಾಪನ್ನು ಶಾಸಕ ಅಶೋಕ್ ಕುಮಾರ್ ರೈ ವಿತರಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ವಂದಿಸಿದರು. ಸಿಆರ್‌ಪಿ ಗಣೇಶ್ ನಡುವಾಲ್ ನಿರೂಪಿಸಿದರು.