ಸಾರಾಂಶ
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಪಂ ವ್ಯಾಪ್ತಿಯ ತಿಂಡ್ಲು ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ, ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಸುಧಾಮೂರ್ತಿ ಅವರೊಂದಿಗೆ ಉದ್ಘಾಟಿಸಿದರು.

ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಾಲ್ಕು ಕೊಠಡಿ ಒಳಗೊಂಡಿದ್ದು ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನಂತರ ಅರದೇಶನಹಳ್ಳಿ ಗ್ರಾಮದಲ್ಲಿ ೨ ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈಮಾಸ್ಟ್ ವಿದ್ಯುತ್ ದೀಪಕ್ಕೆ ಸಚಿವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಬಯಪ ಅಧ್ಯಕ್ಷ ವಿ.ಶಾಂತ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಜಗನ್ನಾಥ್, ಜಾಲಿಗೆ ಗ್ರಾಪಂ ಅಧ್ಯಕ್ಷಆನಂದ್ ಕುಮಾರ್, ಉಪಾಧ್ಯಕ್ಷೆ ಭವ್ಯ ಕೆ ಪ್ರಶಾಂತ್, ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಶಿಕ್ಷಣ ಇಲಾಖೆಯ ಉನಿರ್ದೇಶಕ ಬೈಲಾಂಜಿನಪ್ಪ, ತಹಸೀಲ್ದಾರ್ ಅನಿಲ್ , ಇಒ ಶ್ರೀನಾಥ್ ಗೌಡ, ಬಿಇಒ ಲಲಿತಮ್ಮ, ಜಾಲಿಗೆ ಪಿಡಿಒ ಪ್ರಕಾಶ್, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.