ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಇಲ್ಲಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು.ಬೃಹತ್ ಮತ್ತು ಮಧ್ಯಮ ನೀರಾವರಿ ಯೋಜನೆಗಳು, ಜಲಸಂಪನ್ಮೂಲ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.4 ಕಾಲುವೆ ವಿಭಾಗದ ಚಿಕ್ಕಹೊನ್ನಕುಣಿ ವಿಭಾಗದ ರು. 07.49 ಕೋಟಿ ಮತ್ತು ಕಾಲುವೆ ನಂ.5 ರ ಯರಮರಸ್ ವಲಯ ಯರಮರಸ್‌ನ ರು.359.57 ಒಟ್ಟು ರು.367 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಾಯಿತು.
ಸಣ್ಣ ನೀರಾವರಿ ಇಲಾಖೆಯಿಂದ 48 ಕಾಮಗಾರಿಗಳ ಒಟ್ಟು ರು. 109.73 ಕೋಟಿ ಶಂಕುಸ್ಥಾಪನೆ ನೆರವೇರಿಸಲಾಯಿತು.ಕೆಆರ್‌ಡಿಸಿಎಲ್ ವತಿಯಿಂದ ರಾಯಚೂರು ಬಳಿಯ ಕಲಮಲಾ ಜೆಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ, ಲಿಂಗಸೂಗೂರು ರಸ್ತೆ ವೃತ್ತವರೆಗಿನ 78.45 ಕಿ.ಮೀ. ಉದ್ದದ ರಸ್ತೆಯನ್ನು ಪಿಪಿಪಿ-ಡಿಬಿಎಫ್ಓಎಂಟಿ-ಹೈಬ್ರಿಡ್ಜ್ ವರ್ಷಾಸನಾ ಯೋಜನೆಯಡಿ 1695.85 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಆಯುಷ್ ಇಲಾಖೆಯ 50 ಲಕ್ಷ, ಆರೋಗ್ಯ ಇಲಾಖೆಯ 10 ಕೋಟಿ 54 ಲಕ್ಷ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 9 ಕೋಟಿ, ಕೆಆರ್‌ಐಡಿಎಲ್‌ನ 77 ಕೋಟಿ 54 ಲಕ್ಷದ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಮತ್ತು ಉದ್ಘಾಟನೆಗೊಂಡವು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 1 ಕೋಟಿ 25 ಲಕ್ಷ, ಸಣ್ಣ ನೀರಾವರಿ ಇಲಾಖೆಯ ಒಟ್ಟು 109 ಕೋಟಿ 73 ಲಕ್ಷದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ 4 ಕೋಟಿ 22 ಲಕ್ಷದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.ಜಿಲ್ಲಾ ನಿರ್ಮಿತಿ ಕೇಂದ್ರದ 24 ಕೋಟಿ 53 ಲಕ್ಷ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ, ಸಮಾಜ ಕಲ್ಯಾಣ ಇಲಾಖೆಯ 9 ಕೋಟಿ 27 ಲಕ್ಷ ವೆಚ್ಚದ ಕಾಮಗಾರಿ ಉದ್ಘಾಟನೆ ನೆರವೇರಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆಯ 10 ಕೋಟಿ 65 ಲಕ್ಷ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಕ್ಯಾಶುಟೆಕ್‌ನ 7 ಕೋಟಿ 72 ಲಕ್ಷ ವೆಚ್ಚದ ಕಾಮಗಾರಿಗಳು, ಲೋಕೋಪಯೋಗಿ ಇಲಾಖೆಯ 10 ಕೋಟಿ 32 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳು, ಜಿಲ್ಲೆಯಲ್ಲಿ ಇಂದು ರು.2340 ಕೋಟಿ ವೆಚ್ಚದ ವಿವಿಧ ಇಲಾಖೆಗಳ 478 ಕಾಮಗಾರಿಗಳಿಗೆ ಡಿಸಿಎಂ ಡಿಕೆಶಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.