ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ವಿಕಾಸ ವನ’ ಉದ್ಘಾಟನೆ

| Published : Jun 07 2024, 12:32 AM IST

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ವಿಕಾಸ ವನ’ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು ಎಂದು ಪ್ರಹ್ಲಾದ್‌ ಶೆಟ್ಟಿ ಕಿವಿಮಾತು ಹೇಳಿದರು.

ಬಂಟ್ವಾಳ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ‘ವಿಕಾಸ ವನ’ ಗಿಡ ಮೂಲಿಕೆಗಳ ಉದ್ಯಾನವನವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಟ್ರಸ್ಟ್ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ., ಕಹಿಬೇವಿನ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿವರ್ಷವೂ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗಿರದೆ, ಅದರ ಪಾಲನೆ ಪೋಷಣೆ ಮಾಡಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ., ಶಾಲಾ ಸಿಬ್ಬಂದಿ ವರ್ಗ, ಕಬ್ಸ್- ಬುಲ್‌ಬುಲ್ಸ್, ಸ್ಕೌಟ್ಸ್- ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಶಿಕ್ಷಕಿ ಯಶೋಧ ಕೆ. ಕಾರ್ಯಕ್ರಮ ನಿರ್ವಹಿಸಿದರು.