ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ

| Published : Mar 29 2024, 12:49 AM IST

ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಕುವೆಂಪುನಗರದ ಗಗನಚುಂಬಿ ಜೋಡಿ ರಸ್ತೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರ ಪರವಾಗಿ ಮೈಸೂರು ಕೊಡಗು ಲೋಕಸಭಾ ಚುನಾವಣಾ ಮಾಹಿತಿ ಕೇಂದ್ರವನ್ನು (ವಾರ್ ರೂಂ) ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದರು.

ಶಾಸಕರಾದ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಎಂ.ಕೆ. ಸೋಮಶೇಖರ್, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಮಾಜಿ ಮೇಯರ್ ಗಳಾದ ನಾರಯಣ್, ಟಿ.ಬಿ. ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಮಾಜಿ ಸದಸ್ಯ ಜೆ. ಗೋಪಿ, ಮುಖಂಡರಾದ ಜಿ. ಸೋಮಶೇಖರ್, ಶ್ರೀಧರ್, ಶಿವ ಸಾಗರ್, ಭಾರ್ಗವ್, ರವಿಶಂಕರ್, ವಿಜಯ್ ಕುಮಾರ್, ಗುಣಶೇಖರ್, ವಿನಯ್ ಕುಮಾರ್, ಭವ್ಯಾ, ಇಂದಿರಾ, ಲತಾ ರಂಗನಾಥ್, ಲೀಲಾ ಪಂಪಾಪತಿ, ನಾಗರತ್ನ ಮಂಜುನಾಥ್, ಕಮಲಾ ಕುಮಾರ್, ಮಂಜುನಾಥ್, ಫಾರೂಖ್, ಶಂಕರ್, ಮಧುರಾಜ್, ವೆಂಕಟೇಶ್ ಮೊದಲಾದವರು ಇದ್ದರು.

ರೇಡಿಯೋದಲ್ಲಿ ರಾಜರ ಬಾಯಿಂದ ರಾಜರ ಕಥೆ ಸ್ಥಗಿತ

ಕನ್ನಡಪ್ರಭ ವಾರ್ತೆ ಮೈಸೂರು

104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ರಾಜರ ಬಾಯಿಂದ ರಾಜರ ಕಥೆಗಳು ಪ್ರಸಾರವಾಗುವ ಕಾರ್ಯಕ್ರಮ ಸ್ಥಗಿತವಾಗಿದೆ.ಮೈಸೂರು- ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯದುವೀರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಎಂಬ ಶೀರ್ಷಿಕೆಯಲ್ಲಿ ಮಾತನಾಡುವುದಕ್ಕೆ ಹಾಗೂ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಪ್ರಚಾರಪಡಿಸುವ ಜಾಹೀರಾತನ್ನು ಕೂಡ ಸ್ಥಗಿತ ಗೊಳಿಸಲಾಗಿದೆ.ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮಾ. 25ರಂದು ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಆಯೋಗದ ಗಮನಕ್ಕೆ ತರಲಾಗಿತ್ತು ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ತಿಳಿಸಿದ್ದಾರೆ.