ಬೆಳ್ತಂಗಡಿ ತಾಲೂಕು ಆಡಳಿತ, ತಾ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಕ್ಕೇಡಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ನವೀಕೃತ ಕಟ್ಟಡವನ್ನು ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ

ಬೆಳ್ತಂಗಡಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ. ಮೀಸಲಾತಿ, ಭೂ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ ಪರವಾದ ಕಾರ್ಯಕ್ರಮಗಳೆಲ್ಲವು ಕಾಂಗ್ರೆಸ್ ಸರ್ಕಾರಗಳ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಭಾನುವಾರ ಬೆಳ್ತಂಗಡಿ ತಾಲೂಕು ಆಡಳಿತ, ತಾ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಕ್ಕೇಡಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ನವೀಕೃತ ಕಟ್ಟಡವನ್ನು ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.ಸರ್ಕಾರದ ಅನುದಾನದಲ್ಲಿ ಕಟ್ಟಡ ನಿರ್ಮಾಣಗೊಂಡು ಉಪಯೋಗ ಆಗದೇ ಇದ್ದಾಗ ಪ್ರಯೋಜನ ಇಲ್ಲದಂತಾಗುತ್ತದೆ. ಪ್ರಸ್ತುತ ಕುಕ್ಕೇಡಿಯ ಈ ಭವನವು ಒಂದು ಕೋಟಿಗೂ ಹೆಚ್ಚಿನ ಅನುದಾನದಿಂದ ಸುಂದರವಾಗಿ ನಿರ್ಮಾಣಗೊಂಡಿದೆ. ಇದಕ್ಕೆ ಅನುದಾನ ನೀಡಿದ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಮಾರಂಭದಲ್ಲಿ ಸಚಿವರು ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ‌ ಪ್ರಸ್ತಾವನೆಗೈದರು.

ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಕುಕ್ಕೇಡಿ ಗ್ರಾ.ಪಂ.ಸದಸ್ಯರು, ದ.ಕ.ಜಿ.ಪಂ.ಯೋಜನಾ ನಿರ್ದೇಶಕ ಜಯರಾಮ್ ಇ., ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಮ್, ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ಉಪಸ್ಥಿತರಿದ್ದರು.

ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಪಂ‌ಸದಸ್ಯ ಸಾಹುಲ್ ಹಮೀದ್, ಹಾಗೂ ಇತರ ಮುಖಮಡರುಗಳು ಉಪಸ್ಥಿತರಿದ್ದರು.ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ‌ ಭವಾನಿ ಶಂಕರ್ ಸ್ವಾಗತಿಸಿದರು. ಮುಂಡಾಜೆ ನವೋದಯ ಶಾಲೆಯ ಪ್ರಾಂಶುಪಾಲ ಮುರಳೀಧರ್ ಕಾರ್ಯಕ್ರಮ ನಿರ್ವಹಿಸಿದರು