ಈಗಾಗಲೇ 215 ಪೌರಕಾರ್ಮಿಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ, ಮತ್ತೆ 252 ಪೌರಕಾರ್ಮಿಕರನ್ನೂ ನೇರ ನೇಮಕಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ಮತ್ತೊಂದು ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮಕೈಬೇಕು.

ಹುಬ್ಬಳ್ಳಿ:

ಈಗಾಗಲೇ 215 ಪೌರಕಾರ್ಮಿಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ, ಮತ್ತೆ 252 ಪೌರಕಾರ್ಮಿಕರನ್ನೂ ನೇರ ನೇಮಕಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ಮತ್ತೊಂದು ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಗೆ ನಿರ್ದೇಶನ ನೀಡಿದರು.

ನಗರದ ತಮ್ಮ ಶಾಸಕರ ಕಚೇರಿಯಲ್ಲಿ ಮಂಗಳವಾರ ನೇರ ವೇತನ ಪೌರಕಾರ್ಮಿಕರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 1997-98ನೇ ಸಾಲಿನಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಗೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಇತ್ತೀಚೆಗೆ 215 ಪೌರಕಾರ್ಮಿಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅದೇ ಮಾದರಿಯಲ್ಲಿ ಇನ್ನೂ 252 ಕಾರ್ಮಿಕರನ್ನೂ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸುವಂತೆ ಮತ್ತೊಂದು ಅಧಿಸೂಚನೆ ಹೊರಡಿಸಬೇಕು ಎಂದು ಸೂಚಿಸಿದರು.

ಈ ಮೂಲಕ ಒಟ್ಟು 467 ಪೌರಕಾರ್ಮಿಕರನ್ನು ನೇರ ನೇಮಕಾತಿ ಪ್ರಕ್ರಿಯೆಗೆ ಒಳಪಡಿಸುವುದರ ಜತೆಗೆ, ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಬಾಕಿ ಉಳಿದಿರುವ ಪೌರಕಾರ್ಮಿಕರ ಸೇವಾ ಹಿರಿತನ ಹಾಗೂ ಅರ್ಹತೆ ಪರಿಗಣಿಸಿ, ಸರ್ಕಾರದ ನಿಯಮಾವಳಿಗಳನ್ವಯ ಹಂತ-ಹಂತವಾಗಿ ನೇರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಈ ವೇಳೆ ಪಾಲಿಕೆ ಮಾಜಿ ಸದಸ್ಯ ಶ್ರೀನಿವಾಸ ಬೆಳದಡಿ, ಪೌರಕಾರ್ಮಿಕರಾದ ಮುತ್ತುರಾಜ ಕಲವೂರು, ಸೋಮು ಮೊರಬದ, ಈಶ್ವರ ಹೊಸಮನಿ, ಯಲ್ಲವ್ವ ಗುಡಿಹಾಳ, ಸಾವಕ್ಕ ಛಲವಾದಿ, ಗೀತಾ ಹೊಸಮನಿ, ಚಂದ್ರು ಕಣೆಕಲ್ಲ, ಚಂದ್ರು ಖಾನಾಪುರ, ಆನಂದ ಬೆಳದಡಿ, ರಾಮು ಯಳಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.