ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಬುನಾದಿ. ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯನ್ನು ಕಾಪಾಡುವ ಮಹತ್ವದ ಮಾರ್ಗದರ್ಶಿ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಧಾರವಾಡ:
ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಬುನಾದಿ. ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯನ್ನು ಕಾಪಾಡುವ ಮಹತ್ವದ ಮಾರ್ಗದರ್ಶಿ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾರ್ಯಾಧ್ಯಕ್ಷ ಈರೇಶ ಬಿ. ಅಂಚಟಗೇರಿ ಹೇಳಿದರು.ಇಲ್ಲಿಯ ಪಿ.ವಿ. ಜೋಶಿ ಕಾನೂನು ಕಾಲೇಜಿನಲ್ಲಿ ಗುರುವಾರ ಸಂವಿಧಾನ ಕ್ಲಬ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿ, 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಸಂವಿಧಾನ ಸಭೆಯು ಅಂಗೀಕರಿಸಿತು. 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದಿತು. ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ದೇಶ ಸದಾ ಸ್ಮರಿಸಬೇಕು ಎಂದರು.
ಹೈಕೋರ್ಟ್ ಹಿರಿಯ ನ್ಯಾಯವಾದಿ ವೆಂಕಟೇಶ ಖಾರ್ವಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಸಮಾಜದಲ್ಲಿ ನ್ಯಾಯ, ಸಮಾನತೆ ಮತ್ತು ಕಾನೂನಿನ ಅರಿವು ಮೂಡಿಸುವ ಜವಾಬ್ದಾರಿ ಹೊಂದಬೇಕು. ಭವಿಷ್ಯದಲ್ಲಿ ನ್ಯಾಯವಾದಿಗಳಾಗಿ, ನ್ಯಾಯಾಧೀಶರಾಗಿ ಹಾಗೂ ಕಾನೂನು ತಜ್ಞರಾಗಿ ಬಡವರು, ದುರ್ಬಲರು ಮತ್ತು ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.ಪ್ರಾಂಶುಪಾಲ ಡಾ. ಎಸ್.ಸಿ. ಮಾಳಗಿ, ಶ್ರೀನಿವಾಸ ಪರಾಂಡೆ, ಆಡಳಿತಾಧಿಕಾರಿ ಡಾ. ವೈಷ್ಣವಿ ಸತೀಶ ಇದ್ದರು. ರಾಜ್ಯಮಟ್ಟದ ನೆಗೋಷಿಯೇಷನ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.