ರಕ್ತ ಮಾದರಿ ಪರೀಕ್ಷೆಯನ್ನು ಹೆಚ್ಚಿಸಲು ಡಿಸಿ

| Published : Jul 29 2024, 01:01 AM IST

ಸಾರಾಂಶ

ರಕ್ತ ಮಾದರಿ ಪರೀಕ್ಷೆಯನ್ನು ಹೆಚ್ಚಿಸಲು ಡಿಸಿ ಸೂಚನೆ

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಡೆಂಘಿ ಪ್ರಕರಣ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರದ ಲಕ್ಷಣ ಸೇರಿದಂತೆ ಡೆಂಘಿ ರೋಗ ಲಕ್ಷಣಗಳು ಕಂಡು ಬಂದವರ ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್‌ಗೆ ಸೂಚನೆ ನೀಡಿದರು. ಜಿಲ್ಲಾ ಆಸ್ಪತ್ರೆ ಡೆಂಘಿ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಡೆಂಘಿ ದೃಢಪಟ್ಟ ಪ್ರಕರಣಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ನಂತರ ರೋಗಿಗಳ ಆರೋಗ್ಯ ಪರಿಸ್ಥಿತಿ, ರಕ್ತದ ಒತ್ತಡದ ಮಾಹಿತಿಯನ್ನು ಪಡೆದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘಿ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ನಿರ್ದೇಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಮಕ್ಕಳ ವಾರ್ಡಿಗೆ ಭೇಟಿ ನೀಡಿ ಅವರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲಿಸಿದರು. ಮಕ್ಕಳಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಿಲ್ಲಾ ಆಸ್ಪತ್ರೆಗೆ ಎಷ್ಟು ಬಾರಿ ಭೇಟಿ ನೀಡಿ ಸೂಚನೆ ನೀಡಿದ್ದರೂ ಸ್ವಚ್ಛತೆ ಕಾಪಾಡುವಲ್ಲಿ ಇನ್ನೂ ಸುಧಾರಿಸಿಕೊಂಡಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ನೌಕರರ ಪಟ್ಟಿ ಹಾಗೂ ಅವರಿಗ ಪಾವತಿ ಮಾಡಿರುವ ವೇತನದ ವಿವರವನ್ನು ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರೇಖಾ, ವೈದ್ಯಾಧಿಕಾರಿ ಡಾ. ಚೇತನ್ ಸೇರಿದಂತೆ ಮತ್ತಿತರರು ಹಾಜರಿದ್ದರು.