ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಳ

| Published : Sep 20 2024, 01:47 AM IST

ಸಾರಾಂಶ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಂಡು ಸಾಧನೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು.

ಹರಪನಹಳ್ಳಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಉತ್ತಮ ತರಬೇತಿ ಪಡೆದರೆ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಬಹುದು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಂಡು ಸಾಧನೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ತಾಲೂಕು ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರು, ಒಳಾಂಗಣ ಕ್ರೀಡಾಂಗಣ ಇತರ ಮೂಲಸೌಕರ್ಯಗಳನ್ನು ಒದಗಿಸುವಂತೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರಿಗೆ ಭಿನ್ನವತ್ತಳಿ ಸಲ್ಲಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ. ಷಣ್ಮುಖಪ್ಪ, ಅಕ್ಷರ ದಾಸೋಹ ತಾಲೂಕು ನಿರ್ದೇಶಕ ನಾಗರಾಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ರಾಜಶೇಖರ, ಕಾರ್ಯದರ್ಶಿ ನಟರಾಜ, ನಿವೃತ್ತ ಶಿಕ್ಷಕ ಇಸ್ಮಾಯಿಲ್ ಎಲಿಗಾರ, ಶಿಕ್ಷಣ ಸಂಯೋಜಕ ಗಿರಜ್ಜಿ ಮಂಜುನಾಥ, ಲತಾ ರಾಥೋಡ್, ಜನಾರ್ದನ ರೆಡ್ಡಿ, ಮನೋಹರ, ಪಂಪನಾಯ್ಕ್, ಗುರುಮೂರ್ತಿ ಜಯಣ್ಣ ಪೂಜಾರ, ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಬಿ. ಚಂದ್ರಮೌಳಿ, ಅಂಜಿನಪ್ಪ, ತಿರುಪತಿ, ದಯಾನಂದ, ರಮೇಶ, ಮಹಾದೇವಕ್ಕ, ರುದ್ರಪ್ಪ, ಹೇಮಂತಕುಮಾರ, ಕೊಟ್ರಯ್ಯ, ಚನ್ನಬಸಪ್ಪ, ಅರ್ಜುನ ಪರಸಪ್ಪ, ಗಿರೀಶ ಇದ್ದರು.

ಹರಪನಹಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕಿ ಎಂ.ಪಿ. ಲತಾ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.