ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಷ್ಟ್ರೀಯ ನಿರ್ವಹಣಾ ಮಂಡಳಿಯ ಸದಸ್ಯರಾಗಿ ನೂತನವಾಗಿ ನೇಮಕವಾಗಿರುವ ಡಾ. ಮುರಲೀ ಮೋಹನ ಚೂಂತಾರು ಅವರು ಕುಂದಾಪುರ ತಾಲೂಕು ರೆಡ್ ಕ್ರಾಸ್ ಸೊಸೈಟಿ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದರು.
ಕನ್ನಡಪ್ರಭವಾರ್ತೆ ಮಂಗಳೂರು
ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಷ್ಟ್ರೀಯ ನಿರ್ವಹಣಾ ಮಂಡಳಿಯ ಸದಸ್ಯರಾಗಿ ನೂತನವಾಗಿ ನೇಮಕವಾಗಿರುವ ಡಾ. ಮುರಲೀ ಮೋಹನ ಚೂಂತಾರು ಅವರು ಕುಂದಾಪುರ ತಾಲೂಕು ರೆಡ್ ಕ್ರಾಸ್ ಸೊಸೈಟಿ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದರು.ಕುಂದಾಪುರ ಘಟಕದ ಗೌರವ ಕಾರ್ಯದರ್ಶಿ ಪುರಾಣಿಕ್ ಮತ್ತು ಅಧ್ಯಕ್ಷರಾದ ಜಯಕಾರ ಶೆಟ್ಟಿ, ಡಾ. ಚೂಂತಾರು ಅವರನ್ನು ಗೌರವಿಸಿದರು. ಸಂಘಟನೆಯನ್ನು ಬಲ ಪಡಿಸಲು ಆಜೀವ ಸದಸ್ಯತ್ವವನ್ನು ಹೆಚ್ಚಿಸಲು ಡಾ. ಚೂಂತಾರು ಈ ಸಂದರ್ಭದಲ್ಲಿ ಸಲಹೆ ನೀಡಿದರು. ಅದೇ ರೀತಿ ಕುಂದಾಪುರ ತಾಲೂಕು ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ರಾಜ್ಯದಲ್ಲಿಯೇ ಅತ್ಯಂತ ಕ್ರಿಯಾಶೀಲ ಘಟಕ ಎಂದು ನುಡಿದರು ಮತ್ತು ಮುಂದಿನ ದಿನಗಳಲ್ಲಿ ಮತ್ತಷ್ಟು ಮಾನವೀಯ ಸೇವೆ ನೀಡುವಂತಾಗಲಿ ಎಂದು ಹಾರೈಸಿದರು.