ಹಿಂದೂಗಳ ಮೇಲೆ ಹೆಚ್ಚಿದ ದೌರ್ಜನ್ಯ;ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯ

| Published : Apr 24 2024, 02:32 AM IST

ಹಿಂದೂಗಳ ಮೇಲೆ ಹೆಚ್ಚಿದ ದೌರ್ಜನ್ಯ;ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಮುದಾಯದ ಜನರ ಮೇಲೆ ಅನ್ಯಕೋಮಿನ ಸಮುದಾಯದ ಜನರು ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಹಿಂದೂ ಸಮುದಾಯದ ಜನರಿಗೆ ರಕ್ಷಣೆ ನೀಡದಿರುವುದು ನಮ್ಮ ದೌರ್ಭಾಗ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು, ಪೊಲೀಸ್, ಗೃಹ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಮುತುವರ್ಜಿ ವಹಿಸಬೇಕು.

ಕನ್ನಡಪ್ರಭ ವಾರ್ತೆ ಕನಕಪುರ

ರಾಜ್ಯದಲ್ಲಿ ಹಿಂದೂಗಳ ಮೇಲೆ ಕೊಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನಗೌಡ ಆಗ್ರಹಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ಶ್ರೀರಾಮ ಸೇನೆಯಿಂದ ತಾಲೂಕು ಆಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹಿಂದೂ ಸಮಾಜವನ್ನು ಬೆಚ್ಚಿಬೀಳಿಸುವಂತೆ ಕೆಲವು ಮತಾಂಧ ಮುಸ್ಲಿಮರು ಅಟ್ಟಹಾಸ ಮೆರೆದಿರುವುದು ನಿಜಕ್ಕೂ ಆಘಾತಕಾರಿಯಾಗಿದ್ದು, ರಾಜ್ಯದಲ್ಲಿ ಕಾನೂನು, ಪೊಲೀಸ್, ಸಂವಿಧಾನಕ್ಕೆ ಗೌರವ ಇಲ್ಲದಂತಾಗಿದೆ. ಕಾನೂನನ್ನು ಕೈಗೆತ್ತಿಕೊಂಡು ತಾಲಿಬಾನ್ ಮಾದರಿಯಲ್ಲಿ ಹಿಂದೂಗಳ ಮೇಲೆ ಉಗ್ರವಾಗಿ ವರ್ತಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇತ್ತೀಚೆಗೆ ಬೀದರ್‌ನಲ್ಲಿ (ಲವ್ ಜಿಹಾದ್) ಪ್ರೀತಿ ಹೆಸರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ, ಬೆಳಗಾವಿಯಲ್ಲಿ ಪ್ರೀತಿ ಹೆಸರಿನಲ್ಲಿ ಹಿಂದೂ ಮಹಿಳೆಯರನ್ನು ಮತಾಂತರಕ್ಕೆ ಯತ್ನಿಸಿದ ಪ್ರಕರಣ, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡು ಹಗಲೇ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ, ದಾವಣಗೆರೆ ಯಲ್ಲಿ ಮುಸ್ಲಿಮರಿಂದ ಹಿಂದೂಗಳ ಮೇಲೆ ಹಲ್ಲೆ ಪ್ರಕರಣ, ಚಿತ್ರದುರ್ಗದಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನಿಗೆ ಥಳಿತ, ಬೆಂಗಳೂರಿನಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ, ಬಾಗಲಕೋಟೆಯ ಬಾದಾಮಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಹಿಂದೂ ವ್ಯಾಪಾರಸ್ಥರಿಗೆ ಹಲ್ಲೆ ನಡೆಸಿರುವ ಪ್ರಕರಣಗಳು ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಕೊಲೆ- ದೌರ್ಜನ್ಯ ಪ್ರಕರಣಗಳಿಗೆ ಸಾಕ್ಷಿಯಾಗಿವೆ ಎಂದರು.

ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಮುದಾಯದ ಜನರ ಮೇಲೆ ಅನ್ಯಕೋಮಿನ ಸಮುದಾಯದ ಜನರು ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಹಿಂದೂ ಸಮುದಾಯದ ಜನರಿಗೆ ರಕ್ಷಣೆ ನೀಡದಿರುವುದು ನಮ್ಮ ದೌರ್ಭಾಗ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು, ಪೊಲೀಸ್, ಗೃಹ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿದರು.

ಶ್ರೀ ರಾಮ ಸೇನೆ ಸಂಘಟನೆಯ ಕಿರಣ್, ಹೊನ್ನೇಗೌಡ ರಾಜ್‌ಗೋಪಾಲ್, ರಾಜೇಶ್, ಅರುಣ್ ಕುಮಾರ್, ಪವನ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.