ಬಾಳೆಹೊನ್ನೂರಲ್ಲಿ ಹೆಚ್ಚಿದ ಗಾಳಿ, ಮಳೆಯಬ್ಬರ

| Published : Jun 25 2025, 01:17 AM IST / Updated: Jun 25 2025, 01:18 AM IST

ಸಾರಾಂಶ

ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಸೋಮವಾರ ರಾತ್ರಿ ಬಳಿಕ ಆರಿದ್ರಾ ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಸೋಮವಾರ ರಾತ್ರಿ ಬಳಿಕ ಆರಿದ್ರಾ ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಸೋಮವಾರ ರಾತ್ರಿ ನಂತರ ಮಳೆ ಹಾಗೂ ಗಾಳಿ ಅಬ್ಬರ ಹೆಚ್ಚಾಗಿದೆ. ಬಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿರುವ ಪರಿಣಾಮ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಅಲ್ಲಲ್ಲಿ ಮರದ ಕೊಂಬೆಗಳು ಮುರಿದುಬಿದ್ದ ಪರಿಣಾಮ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದೆ. ನಿರಂತರ ಮಳೆ ಬರುತ್ತಿರುವ ಪರಿಣಾಮ ಅಡಕೆ ತೋಟಕ್ಕೆ ಬೋರ್ಡೋ ದ್ರಾವಣ ಸಿಂಪಡಣೆಗೆ ಅಡಚಣೆ ಉಂಟಾಗಿದೆ. ಕುದುರೆಮುಖ, ಕಳಸ ಭಾಗದಲ್ಲೂ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾನದಿಯಲ್ಲಿ ನೀರಿನ ಹರಿವಿನಲ್ಲಿ ಏರಿಕೆಯಾಗಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ.

ಗಾಳಿ, ಮಳೆಯ ಹಿನ್ನೆಲೆಯಲ್ಲಿ ಅಡಕೆ, ಕಾಫಿ ತೋಟಗಳ ಕಾರ್ಮಿಕರಿಗೆ ಮಾಲೀಕರು ಕೆಲವೆಡೆ ರಜೆ ಘೋಷಣೆ ಮಾಡಿದ್ದರು. ಬಾಳೆಹೊನ್ನೂರು ಸಮೀಪದ ಸಾರಗೋಡು-ಹುಯಿಗೆರೆ ಮುಖ್ಯರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಖಾಂಡ್ಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ತೆರವುಗೊಳಿಸಿದರು.೨೪ಬಿಹೆಚ್‌ಆರ್ ೨:

ಬಾಳೆಹೊನ್ನೂರು ಸಮೀಪದ ಸಾರಗೋಡು-ಹುಯಿಗೆರೆ ಮುಖ್ಯರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.೨೪ಬಿಹೆಚ್‌ಆರ್ ೨: ಬಾಳೆಹೊನ್ನೂರು ಪಟ್ಟಣದಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಾಗ ಕಂಡುಬಂದ ದೃಶ್ಯ.