ಮಕ್ಕಳು ಹಿರಿಯರನ್ನು ಗೌರವಿಸುವ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋಟರಿ ಸಂಸ್ಥೆಯ ಎ. ಲೋಕೇಶ್ ಕುಮಾರ್ ಹೇಳಿದರು.
ಸುಂಟಿಕೊಪ್ಪ : ಮಕ್ಕಳು ಹಿರಿಯರನ್ನು ಗೌರವಿಸುವ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋಟರಿ ಸಂಸ್ಥೆಯ ಎ. ಲೋಕೇಶ್ ಕುಮಾರ್ ಹೇಳಿದರು.
ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ‘ಹಿರಿಯ ಜೀವಿಗಳಿಗೆ ನಮನ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿರಿಯರನ್ನೂ ಗೌರವಿಸುವುದು ನೈಸರ್ಗಿಕ ಧರ್ಮ. ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಸಮಾಜದಲ್ಲಿ ತಮ್ಮ ವ್ಯಕ್ತಿತ್ವವನ್ನು ಗುರುತಿಸಲು ಸಹಾಯವಾಗುವುದು ಎಂದು ತಿಳಿಸಿದರು.ಸುಂಟಿಕೊಪ್ಪದ ಹಿರಿಯ ವರ್ತಕರು ಕ್ರೀಡಾಪಟು ಕೆ.ಪಿ.ಜಗನ್ನಾಥ್, ಸಮಾಜ ಸೇವಕ ಬಿ.ಎಸ್. ಈರಪ್ಪ ಹಾಗೂ ಬಿ.ಎಸ್.ಎನ್.ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ರಶೀದ್ ಖಾನ್ ಅವರನ್ನು ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಶೀದ್ ಖಾನ್ ಮಾತನಾಡಿದರು.ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳಾದ ಎ.ಎಸ್ ಹಾರ್ದಿಕ್, ರಿಫ, ನಪ್ಯ ಖಾನಂ ಹಿರಿಯ ನಾಗರಿಕರ ದಿನಾಚರಣೆಯ ಮಹತ್ವದ ಮತ್ತು ಕಿರಿಯರು ಹಿರಿಯರನ್ನು ಗೌರವಿಸಿ, ಪ್ರೀತಿಸಿ ಹಾಗೂ ಹಿರಿಯ ಜೀವಿಗಳ ಬಗ್ಗೆ ಕಾಳಜಿಯನ್ನು ಇಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಗೌರವಾಧ್ಯಕ್ಷ ರಫೀಕ್ ಖಾನ್, ಎಸ್ ಡಿ ಎಂ ಸಿ ಅಧ್ಯಕ್ಷೆ ಸಂಧ್ಯಾ ಹಾಗೂ ಮುಖ್ಯೋಪಾಧ್ಯಾಯ ಕುಮಾರ್ ಮಾತನಾಡಿದರು.ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರಾದ ಓ.ಪಿ. ದಿನೇಶ್, ಲಿಂಗರಾಜು, ಜಯಂತ್ ಮಾಜಾರಿ ಹಾಗೂ ಹಿರಿಯ ನಾಗರಿಕ ಹೆಚ್.ಉಸ್ಮಾನ್ ಹಾಗೂ ಸಭೆಯಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಸದಸ್ಯರಾದ ಕೆ.ಎಂ.ಆಲಿಕುಟ್ಟಿ, ಶಬೀರ್ ಮತ್ತು ಪೋಷಕರು ಪಾಲ್ಗೊಂಡಿದ್ದರು.