ಸಾರಾಂಶ
ದೇವದುರ್ಗ: ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡಲಾಗುತ್ತಿರುವ ವೇತನ ಜಾರಿ ಹಾಗೂ ಇತರೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಪಟ್ಟಣದ ಮಿನಿವಿಧಾನ ಸೌಧ ಕಚೇರಿ ಆವರಣದಲ್ಲಿ ಗುರುವಾರ ಅನಿರ್ದಿಷ್ಟ ಧರಣಿ ಪ್ರಾರಂಭಿಸಲಾಯಿತು.ಗ್ರಾಮ ಲೆಕ್ಕಿಗರ ಸಂಘದ ಯಂಕಪ್ಪ ಮಾತನಾಡಿ, ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯಮಟ್ಟದಲ್ಲಿ ಹೋರಾಟ ಮಾಡಿದರೂ ಪ್ರಯೋಜನವಾಗದ ಕಾರಣ ಅನಿವಾರ್ಯವಾಗಿ ಧರಣಿ ಮಾಡಬೇಕಾಗಿದೆ. ಆಧುನಿಕ ತಂತ್ರಜ್ಞಾನದಲ್ಲಿ ಬದಲಾವಣೆಗೆ ತಕ್ಕಂತೆ ನಾವೆಲ್ಲರೂ ಸೇವೆ ಸಲ್ಲಿಸುತ್ತಿದ್ದು, ಕೂಡಲೇ ಸರಕಾರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.ತಾಲೂಕು ಸರಕಾರಿ ನೌಕರರ ಸಂಘ ಅಧ್ಯಕ್ಷ ಹನುಮಂತ್ರಾಯ ಶಾಖೆ, ಕಂದಾಯ ನೌಕರರ ಸಂಘ ಅಧ್ಯಕ್ಷ ಶರಣಯ್ಯ ಸ್ವಾಮಿ, ಎನ್ಪಿಎಸ್ ನೌಕರರ ಸಂಘ ಅಧ್ಯಕ್ಷ ಬಸವರಾಜ ಪಾಟೀಲ್, ಕಾರ್ಯದರ್ಶಿ ಅಭಿಷೇಕ ಮಾತನಾಡಿದರು.ಸಂಘದ ಪದಾಧಿಕಾರಿಗಳಾದ ಭೀಮರಾಯ ನಾಯಕ ಗೋವಿಂದಪಲ್ಲಿ, ಭೀಮನಗೌಡ, ಮಹಾದೇವ ಪಾಟೀಲ್ ಮೂಲಿಮನಿ ಹಾಗೂ ಇತರೆ ನೌಕರರು ಕಪ್ಪುಪಟ್ಟಿ ಕಟ್ಟಿಕೊಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.----------------------26ಕೆಪಿಡಿವಿಡಿ01:
ದೇವದುರ್ಗ ಪಟ್ಟಣದ ಮಿನಿವಿಧಾನ ಸೌಧ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ನೌಕರರು ಕಪ್ಪು ಪಟ್ಟಿ ಕಟ್ಟಿಕೊಮಡು ಧರಣಿ ನಡೆಸಿದರು.