ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ ದಂಧೆಗೆ ಅನುಕೂಲವಾಗುತ್ತದೆ ಹೊರತು ರೈತರಿಗೆ ಯಾವುದೇ ಪ್ರಯೋಜನವಾಗಲ್ಲ. ಇದರಿಂದ ಇದ್ದ ಅಲ್ಪ ಸ್ವಲ್ಪ ಜಮೀನನ್ನು ಕಳೆದುಕೊಂಡು ಇಡೀ ಕುಟುಂಬ ಬೀದಿಗೆ ಬರುವುದು ಶತಸಿದ್ಧ.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಗೆಜ್ಜಲಗೆರೆ ಗ್ರಾಪಂ ಅನ್ನು ನಗರಸಭೆ ಸೇರ್ಪಡೆ ವಿರೋಧಿಸಿ ಗ್ರಾಪಂ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರ 5 ದಿನವೂ ಮುಂದುವರೆದಿದೆ.ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು ಸೇರಿದಂತೆ ನೂರಾರು ಮಹಿಳೆಯರು ಧರಣಿ ಸ್ಥಳದಲ್ಲಿ ಬೋಂಡ ಮಾಡಿ ಟೀ ಕುಡಿದು ವಿನೂತನವಾಗಿ ಪ್ರತಿಭಟಿಸಿದರು. ರೈತ ನಾಯಕಿ ಸುನಂದ ಜಯರಾಮ್ ಮಾತನಾಡಿ, ನಗರಸಭೆ ವ್ಯಾಪ್ತಿಗೆ ಗ್ರಾಪಂ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ ದಂಧೆಗೆ ಅನುಕೂಲವಾಗುತ್ತದೆ ಹೊರತು ರೈತರಿಗೆ ಯಾವುದೇ ಪ್ರಯೋಜನವಾಗಲ್ಲ ಎಂದರು.
ಮುಂದಿನ ದಿನಗಳಲ್ಲಿ ಗ್ರಾಮೀಣ ಬಿಲ್ಡರ್ಸ್ ಮತ್ತು ದಲ್ಲಾಳಿಗಳ ಹಣದಾಸೆ ಮತ್ತು ಹುನ್ನಾರಗಳಿಗೆ ಬಲಿಯಾಗಿ ಇದ್ದ ಅಲ್ಪ ಸ್ವಲ್ಪ ಜಮೀನನ್ನು ಕಳೆದುಕೊಂಡು ಇಡೀ ಕುಟುಂಬ ಬೀದಿಗೆ ಬರುವುದು ಶತಸಿದ್ಧ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಮಹಿಳಾ ಸಂಘಟನೆಯ ಸತ್ಯ ಪ್ರೇಮಕುಮಾರಿ, ಗ್ರಾಪಂ ಅಧ್ಯಕ್ಷೆ ರಾಧಾ, ರೈತ ಸಂಘದ ಮುಖಂಡರಾದ ಜಿ.ಎ.ಶಂಕರ್, ವೀರಪ್ಪ, ಬಿಜೆಪಿ ಮುಖಂಡ ಜಿ.ಎಂ.ಯೋಗೇಶ್, ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಚಂದ್ರಶೇಖರ್ ಹಲವರು ಭಾಗವಹಿಸಿದ್ದರು.
೨೯ಕ್ಕೆ ಮಧು ಜಿ.ಮಾದೇಗೌಡರಿಗೆ ಅಭಿನಂದನೆಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡರಿಗೆ ಅಭಿನಂದನಾ ಸಮಾರಂಭವನ್ನು ಡಿ.೨೯ರಂದು ಮಧ್ಯಾಹ್ನ ೨.೩೦ ಗಂಟೆಗೆ ಕೆ.ಎಂ.ದೊಡ್ಡಿಯ ಭಾರತೀ ಎಜುಕೇಷನ್ ಟ್ರಸ್ಟ್ ಆವರಣದ ಕುವೆಂಪು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ತಿಳಿಸಿದರು. ದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದು, ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಅಭಿನಂದನಾ ನುಡಿಗಳನ್ನಾಡುವರು. ವಿಧಾನ ಪರಿಷತ್ ಶಾಸಕ ಮಧು ಜಿ.ಮಾದೇಗೌಡ ಅಭಿನಂದನೆ ಸ್ವೀಕರಿಸುವರು. ಬಿ.ಎಂ.ನಂಜೇಗೌಡ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.