ಸಾರಾಂಶ
ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರದ ೩ ರೈತ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸುತ್ತೇವೆ ಎಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ, ರೈತ ವಿರೋಧಿ ಧೋರಣೆಗಳನ್ನು ತಾಳಿ ಮನೆ, ನಿವೇಶನ ರಹಿತರ, ಬಗರ್ ಹುಕುಂ-ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕಿಗೆ ಧಕ್ಕೆಯುಂಟು ಮಾಡುತ್ತಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ವತಿಯಿಂದ ರೈತ, ಕೃಷಿ ಕೂಲಿಕಾರರ ಭೂಮಿ ಹಕ್ಕಿಗಾಗಿ, ಬಲವಂತದ ಭೂ ಸ್ವಾಧೀನ ವಿರೋಧಿಸಿ ಫೆ.೧೦ರಂದು ವಿಧಾನಸೌಧ ಚಲೋ, ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಕೂಲಿಕಾರರ ಸಂಘದ ಎಂ.ಪುಟ್ಟಮಾದು ತಿಳಿಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅತಿದೊಡ್ಡ ಕಾರ್ಪೊರೇಟ್ ಪರ ಸರ್ಕಾರವಾಗಿದ್ದು, ಕೇಂದ್ರದ ಆಣತಿಯಂತೆ ರಾಜ್ಯ ಸರ್ಕಾರವೂ ಕಾರ್ಪೊರೇಟ್ ಲೂಟಿಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರದ ೩ ರೈತ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸುತ್ತೇವೆ ಎಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ, ರೈತ ವಿರೋಧಿ ಧೋರಣೆಗಳನ್ನು ತಾಳಿ ಮನೆ, ನಿವೇಶನ ರಹಿತರ, ಬಗರ್ ಹುಕುಂ-ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕಿಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಮನೆ-ನಿವೇಶನ, ಸರ್ಕಾರಿ ಭೂಮಿಗಳಲ್ಲಿ ಕಟ್ಟಿಕೊಂಡ ಮನೆಗಳನ್ನು ಸಕ್ರಮಗೊಳಿಸಲು ಕೋರಿ, ಬಗರ್ ಹುಕುಂ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ್ದು ಇವುಗಳನ್ನು ಸರ್ಕಾರ ತಿರಸ್ಕರಿಸುತ್ತಿರುವುದಲ್ಲದೇ, ರೈತರ ಭೂಮಿ ಕಸಿಯುವ ಕೆಲಸಕ್ಕೆ ಮುಂದಾಗಿದೆ ಎಂದು ದೂಡಿದರು.
ರಾಜ್ಯಾದ್ಯಂತ ಸುಮಾರು ೨೫ ಸಾವಿರಕ್ಕೂ ಹೆಚ್ಚು ಮಂದಿ ಕೂಲಿಕಾರ್ಮಿಕರು ಭಾಗವಹಿಸಲಿದ್ದು, ಜಿಲ್ಲೆಯಿಂದಲೂ ೨೫೦೦ ಕ್ಕೂ ಹೆಚ್ಚು ಮಂದಿ ಧರಣಿಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್, ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಜಿಲ್ಲಾ ಸಹ ಸಂಚಾಲಕ ಸಿದ್ದೇಗೌಡ.ಟಿ, ಎನ್.ಲಿಂಗರಾಜು ಮೂರ್ತಿ, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ.ಶಿವಮಲ್ಲಯ್ಯ, ಉಪಾಧ್ಯಕ್ಷ ಆರ್.ರಾಜು, ಸಹಕಾರ್ಯದರ್ಶಿ ಟಿ.ಪಿ.ಅರುಣ್‌ಕುಮಾರ್ ಗೋಷ್ಠಿಯಲ್ಲಿದ್ದರು.