ಸಾರಾಂಶ
ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ
ಕನ್ನಡಪ್ರಭ ವಾರ್ತೆ, ತರೀಕೆರೆತಾಲೂಕು ಗ್ರಾಮ ಅಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವದಿ ಮುಷ್ಕರ ನಡೆಸಿ ಸಂಘದ ಎಲ್ಲ ಪದಾಧಿಕಾರಿಗಳು ತಹಸೀಲ್ದಾರ್ ವಿಶ್ವಜಿತ್ ಮೆಹತಾ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತರೀಕೆರೆ ಆಡಳಿತ ಸೌಧ ಮುಂಭಾಗ ಕಾರ್ಯದರ್ಶಿ ಧನಂಜಯ್ ಮಾತನಾಡಿ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾದ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯ ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1-5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸ ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಗೆ ಸರ್ಕಾರ ಸ್ಪಂದಸದೇ ಇದ್ದಲ್ಲಿ ಮುಂದೆ ಉಗ್ರ ಹೋರಾಟ ನಡೆಸಿ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸ ಲಾಗುವುದು ಎಂದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಧನಂಜಯ್, ವೀಣಾ, ಸಂಜಯ್ ಶ್ರೀಧರ್. ವಿಠಲ್ ಹಾಗೂ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.28ಕೆಟಿಆರ್.ಕೆ.6ಃ
ತರೀಕೆರೆಯಲ್ಲಿ ತಾಲೂಕು ಗ್ರಾಮ ಅಡಳಿತಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ನೆಡೆಸಲಾಯಿತು.