ಸಾರಾಂಶ
ಮೂಲಸೌಲಭ್ಯ, ಸೇವಾ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ನಗರದ ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ಸೋಮವಾರ ೨ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಮೂಲಸೌಲಭ್ಯ, ಸೇವಾ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ನಗರದ ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ಸೋಮವಾರ ೨ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಖವಟಕೊಪ್ಪ ಮಾತನಾಡಿ, ಸರ್ಕಾರದ ಹೊಸ ಹೊಸ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಸರಿಯಾದ ಮೂಲ ಸೌಲಭ್ಯ ನೀಡುತ್ತಿಲ್ಲ. ಹಲವಾರು ಬಾರಿ ಬೇಡಿಕೆ ಬಗ್ಗೆ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಸ್ಪಂದಿಸುತ್ತಿಲ್ಲ. ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯಲಿದೆ. ಬೇಡಿಕೆ ಈಡೇರುವವರೆಗೆ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ ಇವರ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಸದಾಶಿವ ಕುಂಬಾರ, ಅರಬಾಜ ಜಮಖಂಡಿ, ಬಸವರಾಜ ಗುಂಡಿ, ಮಂಜುನಾಥ ನೀಲನ್ನವರ, ರಾಚಯ್ಯ ಮಠಪತಿ, ಅಮಸಿದ್ದ ಬಿರಾದಾರ, ಈರೇಶ ಗೋಕಾಕ, ಸೌರಭ ಮೇತ್ರಿ, ರೇವಣಸಿದ್ದಪ್ಪ ಕಾಮಟೆ, ಚಂದ್ರಕಾಂತ ಹೊಸಮನಿ, ರವಿ ಈಟಿ, ಶಬಾನಾ ಜಮಾದಾರ, ತ್ರೀವೇಣಿ ದೇವರಮನಿ, ದೀಪಾ ಮೇತ್ರಿ, ಸಂಗೀತಾ ವಾಲಿಕರ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.