ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ಸದಸ್ಯರಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿರುವ ಅಂಶವನ್ನು ಜನರಲ್ಲಿ ಮನವರಿಕೆ ಮಾಡಿ, ಗ್ರಾಮದ ಸ್ವಚ್ಛತೆಗೆ ಸಹಕಾರ ನೀಡುವಂತೆ ಮನೆ-ಮನೆಗೆ ಸ್ವಚ್ಛತೆಯ ಸಂದೇಶ ಎಂದು ಸ್ವತ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಈ ಪತ್ರದ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರಡಿಯಾ ಚಾಲನೆ ನೀಡಿದರು .ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ ಜಲಶಕ್ತಿ ಮಂತ್ರಾಲಯ, ಸಾಂಸ್ಕೃತಿಕ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜಂಟಿಯಾಗಿ ಆಗಸ್ಟ್ 8 ರಿಂದ ಆಗಸ್ಟ್ 15 ವರೆಗೆ ಆಯೋಜಿಸಿರುವ ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯೋತ್ಸವದ ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯತ್ ಯಾದಗಿರಿ ವತಿಯಿಂದ ವಿಶೇಷವಾಗಿ ಹಮ್ಮಿಕೊಂಡ “ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ, ಸಂಜೀವಿನಿ ಯೋಜನೆಯ ಒಕ್ಕೂಟದ ಅಧ್ಯಕ್ಷರಿಗೆ (GPLF) ಸ್ವಸಹಾಯ ಸಂಘಗಳ ಅಧ್ಯಕ್ಷರಿಗೆ, ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಿಗೆ (VWSC) ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಕುಡಿಯುವ ನೀರಿನ ಸುರಕ್ಷತೆ, ಜಲ ಮೂಲಗಳ ಸಂರಕ್ಷಣೆಯ” ವಿಷಯದಲ್ಲಿ ವಿಶೇಷ ಆಸಕ್ತಿ ವಹಿಸಿ ಸಹಕಾರ ನೀಡಲು ಸ್ವಚ್ಛತೆಯ ಸಂದೇಶ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ಸ್ವಚ್ಛ ಭಾರತ್ ಮಿಷನ್ (ಗ್ರಾ), ಕುಡಿಯುವ ನೀರು ಸರಬರಾಜು ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ನೀರು & ನೈರ್ಮಲ್ಯ ಸಮಿತಿ ಅಧ್ಯಕ್ಷರು ಆದ್ಯತೆಯ ಮೇಲೆ ಈ ಯೋಜನೆಗಳನ್ನು ಯಶಸ್ವಿಯಾಗಲು ಗ್ರಾಮಕ್ಕೆ ಬೇಕಾಗಿರುವ ಮೂಲಬೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮಬದ್ದವಾಗಿ ಗ್ರಾಮ ಪಂಚಾಯಿತಿಯ ವಿವಿಧ ಯೋಜನೆಗಳ ಕ್ರಿಯಾಯೋಜನೆಗಳನ್ನು ಸರಕಾರದ ಮಾರ್ಗಸೂಚಿಯಂತೆ ತಯಾರಿಸಿ ಅದನ್ನು ಅನುಷ್ಠಾನಗೊಳಿಸಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರ ಪಾತ್ರ ಪ್ರಮುಖವಾಗಿದೆ ಎಂಬ ವಿಷಯವನ್ನು ತಿಳಿಸಿ ,ಅವರಿಂದ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಈ ಪತ್ರದ ಉದ್ದೇಶವಾಗಿದೆ.ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾ.ಕು.ನೀ & ನೈ, ಅಧೀಕ್ಷಕರು, ವಾಶ್ ಘಟಕದ ಸಮಾಲೋಚಕರು, ಸಂಜೀವಿನಿ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))