ಸಾರಾಂಶ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಅವರು ಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಸದಸ್ಯರಾದ ನಿತೀಶ್ ಮಂಚಿ, ರಿಚರ್ಡ್ ಡಿಸೋಜ ಉಪಸ್ಥಿತರಿದ್ದರು. ಪತ್ರಕರ್ತ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.