ಗುಡ್ಡೆಹೊಸೂರು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

| Published : Aug 17 2025, 03:18 AM IST / Updated: Aug 17 2025, 03:19 AM IST

ಸಾರಾಂಶ

ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಡಗರ ಸಂಭ್ರದಿಂದ ನಡೆಯಿತು.

ಕನ್ನಡಪ್ರಭ ವಾರ್ತೆ ಗುಡ್ಡೆಹೊಸುರು

ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ನಾಗೇಂದ್ರ ಅವರು ನೆರವೇರಿಸಿದರು. ಈ ಸಂದರ್ಭ ಎಸ್.ಡಿ.ಎಂ.ಸಿ ಯ ಸರ್ವ ಸದಸ್ಯರು ಹಾಜರಿದ್ದರು. ಈಸಂದರ್ಭ ಯೂತ್‌ ಪಂಚಾಯ್ತಿ ಕಾರ್ಯದರ್ಶಿ ಬಿ.ಎನ್.ರವಿಕುಮಾರ್‌ ಮತ್ತು ಮಾಧ್ಯಮ ಪ್ರತಿನಿಧಿ ನವೀನ್‌ ಚಿನ್ನಪ್ಪ ಮುಂತಾದವರು ಹಾಜರಿದ್ದರು.

ಈ ಸಂದರ್ಭ ಶಾಲಾ ಮಕ್ಕಳಿಂದ ಮತ್ತು ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಸಭಾ ಕಾರ್ಯಕ್ರಮವು ಅಧ್ಯಕ್ಷರಾದ ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಗ್ರಾ.ಪಂ.ಸದಸ್ಯ ಕುಡೆಕ್ಕಲ್‌ ನಿತ್ಯನಂದ ಅವರು ಶಾಲಾ ಮಕ್ಕಳಿಗೆ ಉಚಿತವಾಗಿ ಗುರುತಿನ ಚೀಟಿ, ಟೈ, ಬೆಲ್ಟ್‌ ವಿತರಿಸಿದರು.

ಇದೇ ಸಂದರ್ಭ ಸರಕಾರದಿಂದ ನೀಡುವ ಶೂ ಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯ್ತಿ ಸದಸ್ಯರಾದ ಪ್ರದೀಪ್‌ ಗಂಗಮ್ಮ ಹಾಜರಿದ್ದರು. ಶಾಲಾ ಮುಖ್ಯಶಿಕ್ಷರರಾದ ಕೆ.ಎಸ್.ಸಣ್ಣಸ್ವಾಮಿ ಸ್ವಾಗತಿಸಿ ವಂದಿಸಿದರು.