ಕಾರ್ಕಳದ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಉದ್ಯಮಿ ಮಂಜುನಾಥ್ ಪೂಜಾರಿ ಅವರು ನೆರವೇರಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಕಾರ್ಕಳ: ಇಲ್ಲಿನ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಉದ್ಯಮಿ ಮಂಜುನಾಥ್ ಪೂಜಾರಿ ಅವರು ನೆರವೇರಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಎಂಐಟಿಇ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಅಕ್ಷತ್‌ರಾಜ್ ಜೈನ್, ಪ್ರಾಧ್ಯಾಪಕ ಸುಮಂತ್ ಮತ್ತು ವಿದ್ಯಾರ್ಥಿಗಳಿಂದ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.ಮುಖ್ಯ ಅತಿಥಿಗಳಾಗಿ ಕುಕ್ಕುಂದೂರು ಗ್ರಾಪಂ ಮಾಜಿ ಸದಸ್ಯೆ ಶಾಂತಿ ಕಿಣಿ, ವಿಜೇತ ವಿಶೇಷ ಶಾಲಾ ಅಧ್ಯಕ್ಷ ರತ್ನಾಕರ್ ಅಮೀನ್, ದುರ್ಗಾ ವಿದ್ಯಾ ಟ್ರಸ್ಟ್ ಅಧ್ಯಕ್ಷ ಕೆ. ರಾಧಾಕೃಷ್ಣ ಶೆಟ್ಟಿ, ಅನು ಮೆಲೋಡಿಸ್ ಮುಖ್ಯಸ್ಥ ಆನಂದ್ ನಕ್ರೆ, ಆದ್ಯ ಮೆಲೋಡಿಸ್ ಮುಖ್ಯಸ್ಥ ಹರೀಶ್ ಶಿರ್ವ ಆಗಮಿಸಿದ್ದರು. ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಆಡಳಿತ ನಿರ್ದೇಶಕ ಹರೀಶ್ ಉಪಸ್ಥಿತರಿದ್ದರು. ಕುಕ್ಕುಂದೂರು ಗ್ರಾಪಂ ಹಾಗೂ ಮಂಜುನಾಥ್, ಶಾಂತಿ ಕಿಣಿ ಅವರ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿದರು. ಅನು ಮೇಲೋಡಿಸ್ ಮತ್ತು ಆಧ್ಯಾ ಮೇಲೋಡಿಸ್ ತಂಡದಿಂದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು ಹಾಗೂ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ವಿಶೇಷ ಶಿಕ್ಷಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿ ಡಾ. ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ಶ್ರೀಮತಿ ಶ್ವೇತಾ ವಂದಿಸಿದರು.