ಸಾರಾಂಶ
ಕನ್ನಡಪ್ರಭ ವಾರ್ತೆ, ಉಡುಪಿ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.ಮಹಾತ್ಮಾ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ನಮನ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕರವೇ ಉಡುಪಿ ತಾಲೂಕು ಅಧ್ಯಕ್ಷ ಸತೀಶ್ ಸನಿಲ್ ಧ್ವಜಾರೋಹಣ ನೆರವೇರಿಸಿ 79ನೇ ಸ್ವಾತಂತ್ರೋತ್ಸವದ ಶುಭಾಶಯ ತಿಳಿಸಿದರು.ಈ ವೇಳೆ ಕರವೇ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಈ ವರ್ಷ ಭಾರತಕ್ಕೆ 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ದೇಶದೆಲ್ಲೆಡೆ ಸ್ವಾತಂತ್ರ್ಯ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಹೋರಾಟಗಾರರನ್ನ ಸ್ಮರಿಸೋಣ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸುವ ಸಂಕಲ್ಪದೊಂದಿಗೆ ಈ ದಿನ ಅರ್ಥಪೂರ್ಣವಾಗಿಸೋಣ ಎಂದರು.ಗಣ್ಯರಾದ ಯಾದವ್ ಆಚಾರ್ಯ ಮಾತನಾಡಿ 79ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷರಾದ ಸುಧೀರ್ ಪೂಜಾರಿ, ದೇವಕಿ ಬಾರ್ಕೂರು, ಕಿರಣ್ ಪ್ರತಾಪ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ಸದಸ್ಯರಾದ ಸವಿತಾ, ಮೋಹಿನಿ, ಅನಿಲ್, ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಮುದ್ದು ಮಕ್ಕಳು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿ ಜ್ಞಾನಜ್ಯೋತಿ ಶಿಕ್ಷಕಿ ವಂದಿಸಿದರು.