ಸಾರಾಂಶ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಸಂಜೀವ ಕುಂದರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು.ಈ ಸಂದರ್ಭ ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ ಸಂಚಾಲಕ ಅಂಕಿತ್ ಶೆಟ್ಟಿ, ಪತ್ರಕರ್ತರಾದ ಮೈಕಲ್ ರೋಡ್ರಿಗಸ್, ನಿತೀಶ್ ಮಂಚಿ, ರಿಚರ್ಡ್ ಡಿಸೋಜ, ಹರೀಶ್ ಕುಂದರ್, ಆದಿತ್ಯ ಐತಾಳ್, ಹಿರಿಯರಾದ ಎಂ.ಆರ್. ಪೈ ಮೊದಲಾದವರು ಉಪಸ್ಥಿತರಿದ್ದರು. ಶಶಿಧರ್ ಮಾಸ್ತಿಬೈಲ್ ಸ್ವಾಗತಿಸಿ, ನಿರೂಪಿಸಿದರು.
-------------ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕನ್ನಡಪ್ರಭ ವಾರ್ತೆ ಕಾರ್ಕಳಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ‘ಕ್ರಿಯೇಟಿವ್ ಸವಿಗಾನ’ ಎಂಬ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥ ರಾಜೇಶ್ ಶೆಟ್ಟಿ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥ ಲೋಹಿತ್ ಎಸ್.ಕೆ. ಕಾರ್ಯಕ್ರಮ ನಿರ್ವಹಿಸಿದರು.
;Resize=(128,128))
;Resize=(128,128))
;Resize=(128,128))