ಸಾರಾಂಶ
ಆಲೂರು ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಗಸ್ಟ್ 15ರಂದು ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಹಾಗೂ ಕನ್ನಡಪರ ಸಂಘಟನೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ತಹಸೀಲ್ದಾರ್ ಸಿ. ಪಿ.ನಂದಕುಮಾರ್ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಆಲೂರು
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಗಸ್ಟ್ 15ರಂದು ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಹಾಗೂ ಕನ್ನಡಪರ ಸಂಘಟನೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಸಿ. ಪಿ.ನಂದಕುಮಾರ್ ತಿಳಿಸಿದ್ದಾರೆ.ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಲೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಶಾಸಕರಾದ ಸಿಮೆಂಟ್ ಮಂಜು ಅವರು ಭಾಗವಹಿಸಿ ಧ್ವಜ ಸಂದೇಶ ನೀಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಿದರು.
ವರ್ಷಕ್ಕೊಮ್ಮೆ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಕೆಲ ಇಲಾಖೆ ಮುಖ್ಯಸ್ಥರು ಗೈರಾಗಿದ್ದಾರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಅವರು ತಹಸೀಲ್ದಾರ್ ನಂದಕುಮಾರ್ ಅವರನ್ನು ಒತ್ತಾಯಿಸಿದರೂ ಅವರಿಗೆ ನೋಟಿಸ್ ನೀಡುವುದಾಗಿ ತಿಳಿಸಿದರಲ್ಲದೆ ಗೈರಾಗಿದ್ದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಐದು ಜನರ ಸಮಿತಿ ರಚಿಸಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರು ಹಾಗೂ ಎಸ್‌ಎಸ್ ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ಜವಾಬ್ದಾರಿ ವಹಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಸರ್ಕಲ್ ಇನ್ಸ್‌ಪೆಕ್ಟರ್ ಗಂಗಾಧರ್, ಹಿರಿಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ ಎಸ್ ಮಂಜೇಗೌಡ, ಕಸಾಪ ತಾಲೂಕ ಅಧ್ಯಕ್ಷ ಗೋಪಾಲಕೃಷ್ಣ, ಆಲೂರು- ಕಟ್ಟಾಯ ಮಂಡಲದ ಬಿಜೆಪಿ ಅಧ್ಯಕ್ಷ ಉಮಾ ರವಿಪ್ರಕಾಶ್, ಕಸಾಪ ಮಾಜಿ ಅಧ್ಯಕ್ಷ ಎಸ್ ಎಸ್ ಶಿವಮೂರ್ತಿ, ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.