ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು.ಈ ವೇಳೆ ಮಾತನಾಡಿದ ಮುಹಮ್ಮದೀಯ ಎಜುಕೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ, ಈ ದೇಶವು ಸ್ವಾತಂತ್ರ್ಯಗೊಂಡು 79 ವರ್ಷ ಕಳೆದಿದೆ. ಈ ದೇಶದ ಸ್ವಾತಂತ್ರ್ಯಕ್ಕಾಗಿ, ಗಡಿ, ಧರ್ಮ, ಭಾಷೆಯ ಭೇದ ಮರೆತು ಸರ್ವರು ಒಗ್ಗಟ್ಟಾಗಿ ಹೋರಾಟ ನಡೆಸಿ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾದೆವು. ಆದರೆ ಇಂದು ಗಡಿ, ಭಾಷೆ, ಹಿಂದೂ, ಮುಸ್ಲಿಮ್ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿದ್ದು ಇದು ಆಘಾತಕಾರಿಯಾಗಿದೆ ಎಂದರು.ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳನ್ನು ಹಾಡಿದರು.ಈ ಸಂದರ್ಭ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಇದ್ರಿಸ್ ಹೂಡೆ, ಟ್ರಸ್ಟಿ ಉಮರ್ ಉಸ್ತಾದ್, ಸಂಸ್ಥೆಯ ಆಡಾಳಿತಾಧಿಕಾರಿ ಅಸ್ಲಮ್ ಹೈಕಾಡಿ, ಅಕಾಡೆಮಿಕ್ ಮುಖ್ಯಸ್ಥ ಹಸೀಬ್ ತರಫ್ದಾರ್, ಇಸ್ಲಾಮಿಕ್ ಸ್ಟಡೀಸ್ ಮುಖ್ಯಸ್ಥ ಮೌಲನ ಶಹೀದ್ ನದ್ವಿ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಶಬೀನಾ, ಪಿಯುಸಿಯ ಪ್ರಾಂಶುಪಾಲೆ ದಿವ್ಯ ಪೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುನಂದಾ, ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯಿನಿ ಯಾಸ್ಮೀನ್, ಕಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯ ಸಾದಾತ್ ಹಾಗೂ ಶಿಕ್ಷಕರು, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹನಿಯಾ ಮರ್ಯಮ್ ನಿರೂಪಿಸಿದರು. ವಿದ್ಯಾರ್ಥಿನಿ ಟಿ.ಎಚ್.ಮುಸ್ಕನ್ ಸ್ವಾಗತಿಸಿದರು. ಶಿಫಾ ಶೆರಿನ್ ವಂದಿಸಿದರು.