ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಶಾಸಕ ಯಶ್ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ನಗರ ಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಾಜಿ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಮತ್ತಿತರರು ಉಪಸ್ಥಿತರಿದ್ದರು.