ತಾಲೂಕು ಕಸಾಪದಲ್ಲಿ ಸ್ವಾತಂತ್ರ್ಯ ಸಂಭ್ರಮ

| Published : Aug 16 2025, 12:00 AM IST

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್‌ಕುಮಾರ್‌ ಕಲಾ ಮಂದಿರದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾ.ಕಸಾಪ ಕೋಶಾಧ್ಯಕ್ಷ ಸಾ.ಲ.ಕಮಲನಾಥ್ ಧ್ವಜಾರೋಹಣ ನೆರವೇರಿಸಿದರು.

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್‌ಕುಮಾರ್‌ ಕಲಾ ಮಂದಿರದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾ.ಕಸಾಪ ಕೋಶಾಧ್ಯಕ್ಷ ಸಾ.ಲ.ಕಮಲನಾಥ್ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಭಾರತ ದೇಶ ಸ್ವಾತಂತ್ರ್ಯಾನಂತರ ಹಲವಾರು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲೂ ಒಂದಾಗಿದೆ. ಹಲವು ವೈವಿಧ್ಯಮಯ ಸಂಸ್ಕೃತಿ, ಭಾಷೆ, ಪ್ರಾದೇಶಿಕತೆಗಳ ಮಧ್ಯೆಯೂ ಭಾರತ ಏಕತೆಯನ್ನು ಸಾಧಿಸಿದೆ ಎಂದರು.

ತಾ.ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಚಳವಳಿಗಾರರ ಕೊಡುಗೆ ಅಪಾರವಾಗಿದೆ. ಟಿ.ಸಿದ್ದಲಿಂಗಯ್ಯ, ರುಮಾಲೆ ಚನ್ನಬಸವಯ್ಯ, ಎಚ್.ಮುಗುವಾಳಪ್ಪ ಮುಂತಾದವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದರು ಎಂಬುದು ಹೆಮ್ಮೆಯ ವಿಚಾರವಾಗಿದೆ ಎಂದರು.

ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಿದ್ದರು. ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಪ್ರಾಂಶುಪಾಲ‌ ಎಂ.ಸಿ.ಮಂಜುನಾಥ್, ತಾ.ಕಸಾಪ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಾಪ ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಮುನಿರಾಜು, ಸಫೀರ್, ಕನ್ನಡ ಜಾಗೃತ ವೇದಿಕೆಯ ನಾಗರಾಜು, ಸಿಂಗಂ ಸುರೇಶ್, ಕಲಾವಿದರಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಖಿ ಮಲ್ಲೇಶ್ ಭಾಗವಹಿಸಿದ್ದರು.15ಕೆಡಿಬಿಪಿ6- ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.