ಸ್ವಾತಂತ್ರ್ಯೋತ್ಸವ: ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ

| Published : Aug 17 2024, 12:47 AM IST

ಸಾರಾಂಶ

ಭಾಗಮಂಡಲ ಗ್ರಾಮ ಪಂಚಾಯಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಭಾಗಮಂಡಲ ಗ್ರಾಮ ಪಂಚಾಯಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.ಕ್ರೀಡಾಕೂಟವನ್ನು ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಮತ್ತು ಆಡಳಿತ ಮಂಡಳಿ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕೊಡಗು ಜೇನು ಕೃಷಿಕರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಉದ್ಘಾಟಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ವತಿಯಿಂದ ತಾವೂರು ಗ್ರಾಮದ ವೈದ್ಯ ಹಾಗೂ ಸಾಹಿತಿ ಮೇಜರ್ ಡಾ. ಕುಶವಂತ್ ಕೋಳಿ ಬೈಲು ಅವರನ್ನು ಸನ್ಮಾನಿಸಲಾಯಿತು.ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೋರಂಗಾಲ ಬಿ ತಂಡ ಪ್ರಥಮ ಸ್ಥಾನ ಗಳಿಸಿತು. ದ್ವಿತೀಯ ಸ್ಥಾನವನ್ನು ಪಯಸ್ವಿನಿ ಸಂಪಾಜೆ ತಂಡ ಗೆದ್ದುಕೊಂಡಿತು. ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೋರಂಗಾಲ ಲೇಡೀಸ್ ಕ್ಲಬ್ ತಂಡ ಪ್ರಥಮ ಸ್ಥಾನವನ್ನು, ಮಹಾದೇವ ಸ್ಪೋರ್ಟ್ಸ್ ಬಲಮುರಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನಗಳನ್ನು ವಿತರಿಸಲಾಯಿತು.