ಸಾರಾಂಶ
ಪಾರಾಣೆ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತು ವನಮಹೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗಣ್ಯರು ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ಸಮೀಪದ ಪಾರಾಣೆ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮತ್ತು ವನಮಹೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪೆಬ್ಬಾಟಂಡ ಪೆಮ್ಮಯ್ಯ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಪಾಲ್ಗೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುಕ್ಕಾಟಿರ ಕುಶಾಲಪ್ಪ, ಲಯನ್ಸ್ ಕಾಂಡಂಡ ರೇಖಾ ಪೊನ್ನಣ್ಣ, ಮುಖ್ಯ ಶಿಕ್ಷಕಿ ಮುಕಾಟಿರ ರಜನಿ ಉಪಸ್ಥಿತರಿದ್ದು ಅತಿಥಿಗಳು ದಿನದ ಮಹತ್ವದ ಬಗ್ಗೆ ಮಾತನಾಡಿ ಪುಣ್ಯ ಪುರುಷರ ಆದರ್ಶ ವನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ವನಮಹೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ವತಿಯಿಂದ ವಿವಿಧ ತಳಿಯ ಹಲವಾರು ಹಣ್ಣಿನ ಗಿಡಗಳನ್ನು ಒದಗಿಸಲಾಯಿತು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿ ವಿಜೇತರಿಗೆ ಲಯನ್ಸ್ ಕ್ಲಬ್ ವತಿಯಿಂದ ಅರ್ಹತಾ ಪತ್ರ, ಬಹುಮಾನಗಳನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಸದಸ್ಯರಾದ ಮುಕ್ಕಾಟಿರ ವಿನಯ್, ಕುಂಡ್ಯೋಳಂಡ ಮುತ್ತಪ್ಪ, ಎಳ್ತಂಡ ಬೋಪಣ್ಣ ಅಪ್ಪು ಮಣಿಯಂಡ ಭೀಮಯ್ಯ, ಮಾದೆಯಂಡ ಕುಟ್ಟಪ್ಪ, ಡಾ. ಪಂಚಮ್ ತಿಮ್ಮಯ್ಯ, ಶಾಲಾ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.